ರೇವಣಸಿದ್ಧೇಶ್ವರ ಸ್ವಾಮೀಜಿ ನಿಧನ

ಬಾಗಲಕೋಟೆ: ವೀರಶೈವ ಸಮಾಜದ ಪ್ರಮುಖ ಮಠಗಳಲ್ಲೊಂದಾದ ಟೀಕಿನಮಠದ ಪೀಠಾಧಿಪತಿ ರೇವಣಸಿದ್ಧೇಶ್ವರ ಸ್ವಾಮೀಜಿ (61) ಅನಾರೋಗ್ಯದಿಂದ ಮಂಗಳವಾರ ನಿಧನರಾದರು. ಮಠದ ಆವರಣದಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಿತು. ಸ್ವಾಮೀಜಿ ಗೌರವಾರ್ಥ ಅಂಗಡಿ–ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು.
ಸ್ವಾಮೀಜಿ 1974ರಲ್ಲಿ ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದರು. ಮಠದ ಅಭಿವೃದ್ಧಿಗಾಗಿ ಶ್ರಮಿಸಿದ ಅವರು, ಪ್ರತಿ ವರ್ಷ ಪುರಾಣ, ಪ್ರವಚನ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದರು. ಭಕ್ತರಲ್ಲಿ ಧಾರ್ಮಿಕ, ಆಧ್ಯಾತ್ಮಿಕ, ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಶ್ರಮಿಸಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.