ಮಂಗಳವಾರ, ನವೆಂಬರ್ 12, 2019
28 °C

ರೇವಣ್ಣಗೆ ಟಿಕೆಟ್ ನೀಡಿ: ಕಾಗಿನೆಲೆ ಸ್ವಾಮೀಜಿ ಆಗ್ರಹ

Published:
Updated:

ಬೆಂಗಳೂರು: ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು' ಎಂದು  ಕಾಗಿನೆಲೆ ಮಹಾ ಸಂಸ್ಥಾನದ ಈಶ್ವರಾನಂದಪುರಿ ಸ್ವಾಮೀಜಿ ಆಗ್ರಹಿಸಿದರು.ಕರ್ನಾಟಕ ಪ್ರದೇಶ ಕುರುಬರ ಸಂಘ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ರೇವಣ್ಣ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲೇ ಇದ್ದಾರೆ. ಹೀಗಾಗಿ ಹೆಬ್ಬಾಳದಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕು' ಎಂದರು.ನಗರದ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಕನಿಷ್ಠ 4 ಕ್ಷೇತ್ರಗಳಲ್ಲಿ ಕುರುಬ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದರು.ಹೈದರಾಬಾದ್ ಕರ್ನಾಟಕದಲ್ಲಿ ಒಬ್ಬರಿಗೂ ಸ್ಪರ್ಧಿಸಲು ಅವಕಾಶ ನೀಡದೆ ಇರುವುದು ಖಂಡನೀಯ. ಮುಂಬೈ ಕರ್ನಾಟಕದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಪರ್ಧಿಸಲು ಎಲ್ಲಾ ರಾಜಕೀಯ ಪಕ್ಷಗಳು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಕ್ರಿಯಿಸಿ (+)