ಶುಕ್ರವಾರ, ಮೇ 27, 2022
27 °C

ರೇವಣ್ಣ ವಿರುದ್ಧ ಅರ್ಜಿ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಜೆಡಿಎಸ್ ಮುಖಂಡ, ಹಾಸನ ಹಾಲು ಒಕ್ಕೂಟದ ಅಧ್ಯಕ್ಷ ಎಚ್.ಡಿ.ರೇವಣ್ಣ ಅವರು ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷರಾಗಿದ್ದ ವೇಳೆ ಕೋಟ್ಯಂತರ ರೂಪಾಯಿಅವ್ಯವಹಾರ ನಡೆಸಿದ್ದು, ಇದರ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟ್ ಗೆರಿಟ್ ಅರ್ಜಿ ಸಲ್ಲಿಸಲಾಗಿದೆ. ಒಕ್ಕೂಟದ ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸುವಂತೆ ಹಾಗೂ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಆದೇಶಿಸುವಂತೆ ಸತೀಶ್ ಭಟ್ ಹಾಗೂ ಇತರರು ಅರ್ಜಿಯಲ್ಲಿ ಕೋರಿದ್ದಾರೆ. ಈ ಅರ್ಜಿಯು ನ್ಯಾಯಮೂರ್ತಿ ಎಸ್. ಅಬ್ದುಲ್‌ನಜೀರ್ ಅವರ ಮುಂದೆ ಗುರುವಾರ ವಿಚಾರಣೆಗೆ ಬರಲಿದೆ.1994ರಿಂದ 2001ರ ಅವಧಿಯಲ್ಲಿ ರೇವಣ್ಣ ಅವರು ಅಧ್ಯಕ್ಷರಾಗಿದ್ದ ವೇಳೆ ಸುಮಾರು 55 ಕೋಟಿ ರೂಪಾಯಿ ಹಣಕಾಸು ಅವ್ಯವಹಾರ ನಡೆದಿದೆ. ಇದರ ಜೊತೆಗೆ ಸುಮಾರು 38 ಕೋಟಿ ರೂಪಾಯಿಗಳ ಇತರ ಅವ್ಯವಹಾರ ನಡೆಸಿದ್ದಾರೆ. ಮಹಾಮಂಡಲದ ಲೆಕ್ಕಪತ್ರಗಳ ಪರಿಶೀಲನೆ ನಡೆಸಿದಾಗ ಇದು ಬೆಳಕಿಗೆ ಬಂದಿದೆ ಎನ್ನುವುದು ಅರ್ಜಿದಾರರ ಆರೋಪ. ಇಷ್ಟೇ ಅಲ್ಲದೇ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಮಹಾಮಂಡಲದಲ್ಲಿ ಮನಸೋ ಇಚ್ಛೆ ನೇಮಕಾತಿ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.