ಶುಕ್ರವಾರ, ಮೇ 14, 2021
28 °C

ರೇಷ್ಮೆ ಕೃಷಿ ಅಧ್ಯಯನಕ್ಕೆ ಮಹಾರಾಷ್ಟ್ರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ರೇಷ್ಮೆ ಕೃಷಿ ಮತ್ತು ಅದರ ಮಾರುಕಟ್ಟೆ ಬಗ್ಗೆ ಅಧ್ಯಯನ ಮಾಡಲು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಾಕರ ಗಾಯಕವಾಡ ನೇತೃತ್ವದ ಅಧಿಕಾರಿಗಳ ತಂಡ ಶುಕ್ರವಾರ ನಗರಕ್ಕೆ ಬಂದಿದ್ದು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಜತೆ ಮಾತುಕತೆ ನಡೆಸಿತು.ಎರಡು ದಿನಗಳ ಭೇಟಿ ಸಲುವಾಗಿ ರಾಜ್ಯಕ್ಕೆ ಬಂದಿರುವ ಈ ತಂಡ, ರೇಷ್ಮೆ ಕೃಷಿ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಲಿದೆ. ರಾಜ್ಯದಲ್ಲಿ ರೇಷ್ಮೆ ಕೃಷಿಗೆ ನೂರಾರು ವರ್ಷಗಳ ಇತಿಹಾಸ ಇದೆ. ಆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಬಂದಿರುವುದಾಗಿ ರತ್ನಾಕರ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮ, ರೇಷ್ಮೆ ಇಲಾಖೆ ಆಯುಕ್ತೆ ನಾಗಲಾಂಬಿಕಾ ದೇವಿ ಸಭೆಯಲ್ಲಿ ಹಾಜರಿದ್ದರು. ರೇಷ್ಮೆ ಕೃಷಿ ಕುರಿತು ಮಾಹಿತಿ ನೀಡಿದರು. ಮಹಾರಾಷ್ಟ್ರದಲ್ಲಿ ರೇಷ್ಮೆ ಕೃಷಿಗೆ ಹೆಚ್ಚಿನ ಒತ್ತು ನೀಡುವ ತೀರ್ಮಾನವನ್ನು ತೆಗೆದುಕೊಂಡಿರುವ ಹಿನ್ನೆಲೆಯಲ್ಲಿ ಈ ಭೇಟಿ ನೀಡಿದ್ದು, ಇಲ್ಲಿನ ಕೇಂದ್ರೀಯ ರೇಷ್ಮೆ ಮಂಡಳಿಯ ಅಧಿಕಾರಿಗಳ ಜತೆಗೂ ಚರ್ಚೆ ನಡೆಸಲಿದ್ದಾರೆ. ನಂತರ ರಾಮನಗರ ರೇಷ್ಮೆ ಮಾರುಕಟ್ಟೆ ಮತ್ತು ಮೈಸೂರಿಗೂ ಭೇಟಿ ನೀಡಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.ಕೊಯ್ನಾ ನೀರು: ಸರ್ಕಾರ ತಿರ್ಮಾನಿಸಬೇಕುಬೆಂಗಳೂರು: `ಕೊಯ್ನಾ ಜಲಾಶಯದ ನೀರನ್ನು ಕರ್ನಾಟಕಕ್ಕೆ ಬಿಡುವ ಸಂಬಂಧ ಸರ್ಕಾರದ ಉನ್ನತ ಮಟ್ಟದಲ್ಲಿ ತೀರ್ಮಾನವಾಗಬೇಕಿದೆ. ನಾನು ಆ ಬಗ್ಗೆ ಏನನ್ನೂ ಹೇಳುವುದಿಲ್ಲ~ ಎಂದು ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಾಕರ ಗಾಯಕವಾಡ ಶುಕ್ರವಾರ ಇಲ್ಲಿ ತಿಳಿಸಿದರು.ರೇಷ್ಮೆ ಕೃಷಿ ಅಧ್ಯಯನ ಸಲುವಾಗಿ ರಾಜ್ಯಕ್ಕೆ ಬಂದಿರುವ ಅವರು, ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿದರು.ಪದೇ ಪದೇ ಕೊಯ್ನಾ ನೀರಿನ ವಿಚಾರವನ್ನೇ ಸುದ್ದಿಗಾರರು ಕೇಳಿದಾಗ, `ಸ್ವಲ್ಪ ದಿನದಲ್ಲಿ ಆ ಬಗ್ಗೆ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ~ ಎಂದಷ್ಟೇ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.