ಸೋಮವಾರ, ಜೂನ್ 14, 2021
22 °C

ರೇಷ್ಮೆ ಬೆಳೆಗಾರರ ಬೇಡಿಕೆ ಈಡೇರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೇಷ್ಮೆ ಬೆಳೆಗಾರರ ಬೇಡಿಕೆ ಈಡೇರಿಸಲು ಒತ್ತಾಯ

ಸಂಸತ್ ಚಲೋ ಚಳವಳಿ: ಎಚ್ಚರಿಕೆ

ಬೆಂಗಳೂರು:  `ಕೇಂದ್ರ ಸರ್ಕಾರ ರೇಷ್ಮೆ ಬೆಳೆಗಾರರ ಬೇಡಿಕೆ ಈಡೇರಿಸದಿದ್ದರೆ ಸಂಸತ್  ಚಲೋ, ಜೈಲ್ ಭರೋ ಚಳವಳಿ ನಡೆಸಬೇಕಾಗುತ್ತದೆ~ ಎಂದು ಸುಂಕ ರಹಿತ ರೇಷ್ಮೆ ಆಮದು ವಿರೋಧಿ ಅಖಿಲ ಭಾರತ ಹೋರಾಟ ಸಮಿತಿಯ ಸಂಘಟನಾ ಸಂಚಾಲಕ ಜಿ.ಸಿ. ಬಯ್ಯಾರೆಡ್ಡಿ ಎಚ್ಚರಿಕೆ ನೀಡಿದರು.ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಿ ಎಂದು ಒಂದೂವರೆ ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.ದೆಹಲಿಯಲ್ಲಿ ಮಾರ್ಚ್ ಐದರಂದು ನಿಗದಿಯಾಗಿರುವ ರೇಷ್ಮೆ ಬೆಳೆಗಾರರ ಅಖಿಲ ಭಾರತ ಸಮಾವೇಶ ಭಾಗವಹಿಸಲಾಗುತ್ತದೆ. ಮಾರ್ಚ್ 19ಕ್ಕೆ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು ಅದರಲ್ಲಿ ರೇಷ್ಮೆ ಬೆಳೆಗಾರರ ಹಿತ ಕಾಯುವಂತಹ ನಿರ್ಧಾರವನ್ನು ಸರ್ಕಾರ ಪ್ರಕಟಿಸಬೇಕು. ಇಲ್ಲದಿದ್ದರೆ ಮೊದಲು ಸಂಸತ್ ಚಲೋ ಚಳವಳಿ ಮಾಡಲಾಗುತ್ತದೆ. ಜೈಲ್ ಭರೋ ಚಳವಳಿಯನ್ನೂ ನಡೆಸಲಾಗುತ್ತದೆ. ಸಮಾವೇಶದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.`ಪತ್ರ ಚಳವಳಿಯನ್ನು ಈಗಾಗಲೇ ಆರಂಭಿಸಲಾಗಿದ್ದು ಸುಮಾರು ನಲವತ್ತು ಸಾವಿರ ಪತ್ರಗಳನ್ನು ಪ್ರಧಾನ ಮಂತ್ರಿ ಅವರಿಗೆ ಬರೆಯಲಾಗಿದೆ. ಮಾರ್ಚ್ 15ರ ಒಳಗೆ ಒಂದು ಲಕ್ಷ ಪತ್ರ ಬರೆಯಲಾಗುತ್ತದೆ. ಮಾರ್ಚ್ 5 ಅಥವಾ 6ರಂದು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಯೋಚನೆಯೂ ಇದೆ~ ಎಂದು ಅವರು ಹೇಳಿದರು.`ರೇಷ್ಮೆ ಆಮದು ಸುಂಕವನ್ನು ಶೇ31ಕ್ಕೆ ಏರಿಸಬೇಕು. ಒಂದು ಕೆ.ಜಿ. ರೇಷ್ಮೆ ಉತ್ಪಾದನೆಗೆ ಕನಿಷ್ಠ 350 ರೂಪಾಯಿ ವೆಚ್ಚವಾಗುತ್ತದೆ. ಇದನ್ನು ಆಧಾರವಾಗಿಟ್ಟುಕೊಂಡು ಕನಿಷ್ಠ ಬೆಲೆ ನಿಗದಿ ಮಾಡಬೇಕು. ಹಿಂದಿನ ಬಜೆಟ್ ಮಂಡನೆಯಾದ ದಿನದಿಂದ ಇಲ್ಲಿಯ ಕನಿಷ್ಠ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟವಾಗಿರುವ ರೇಷ್ಮೆಯ ವ್ಯತ್ಯಾಸ ಹಣವನ್ನು ಸರ್ಕಾರ ಭರಿಸಬೇಕು~ ಎಂದು ಅವರು ಒತ್ತಾಯಿಸಿದರು. ಕಚೇರಿ ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.