ಭಾನುವಾರ, ಮೇ 9, 2021
27 °C

ರೈಡರ್ಸ್- ಚಾರ್ಜರ್ಸ್ ಪಂದ್ಯಕ್ಕೆ ಮಳೆ ಅಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ (ಪಿಟಿಐ): ಡೆಕ್ಕನ್ ಚಾರ್ಜರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳ ನಡುವಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ 8.00 ಗಂಟೆಗೆ ಈ ಪಂದ್ಯ ಆರಂಭವಾಗಬೇಕಿತ್ತು.

ಆದರೆ ಪಂದ್ಯದ ಆರಂಭಕ್ಕೆ ಅರ್ಧ ಗಂಟೆ ಇದ್ದಾಗ ಮಳೆ ಸುರಿಯಲಾರಂಭಿಸಿತು. ಸುಮಾರು ಒಂದು ಗಂಟೆಗೂ ಅಧಿಕ ಹೊತ್ತು ಧಾರಾಕಾರ ಮಳೆ ಸುರಿದ ಕಾರಣ ಅಂಗಳದಲ್ಲಿ ಸಾಕಷ್ಟು ನೀರು ನಿಂತಿದೆ. ಕ್ರೀಡಾಂಗಣದ ಸಿಬ್ಬಂದಿ ಅಂಗಳವನ್ನು ಪಂದ್ಯಕ್ಕಾಗಿ ಸಜ್ಜುಗೊಳಿಸುವ ಪ್ರಯತ್ನ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.