ನರಸಿಂಹರಾಜಪುರ: ರೈತರ ಸಮಸ್ಯೆಗಳನ್ನು ಬಗೆಹರಿಸಲು ನಿರಂತರ ಹೋರಾಟ ಮಾಡುವ ಉದ್ದೇಶವನ್ನು ಜೆಡಿಎಸ್ ಹೊಂದಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.

ಇಲ್ಲಿನ ಹಳೆ ಕೆನರಾ ಬ್ಯಾಂಕ್ ಪಕ್ಕ ಶನಿವಾರ ಸಂಜೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಜೆಡಿಎಸ್ ಅಭ್ಯರ್ಥಿಗೆ ಈ ಚುನಾವಣೆಯಲ್ಲಿ ಗೆಲ್ಲಿಸಿದರೆ ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲು ಇದು ದಿಕ್ಸೂಚಿಯಾಗಲಿದೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಸಿ.ನಾಣಯ್ಯ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದ ಜನರ ತೆರಿಗೆ ಹಣವನ್ನು ಬಳಿ ಅನ್ಯಾಯ ಅನಾಚಾರದಲ್ಲಿ ತೊಡಗಿದ್ದಾರೆ ಎಂದು ದೂರಿದರು. ರೈತರ ಪರ ತೀರ್ಮಾನ ತೆಗೆದು ಕೊಂಡಿದ್ದು, ಜನತಾದಳ ಸರ್ಕಾರ ಮಾತ್ರ.ಸಚಿವ ಸಂಪುಟದಲ್ಲಿದ್ದು ಕೊಂಡು ಮುಖ್ಯಮಂತ್ರಿಯನ್ನು ಟೀಕಿಸುವ ಸಚಿವರನ್ನು ಬಿಜೆಪಿ ಪಕ್ಷದಲ್ಲಿ ಮಾತ್ರ ಕಾಣಲು ಸಾಧ್ಯ ಎಂದರು.

ಜೆಡಿಎಸ್ ಮುಖಂಡ ಮಧು ಬಂಗಾರಪ್ಪ ಮಾತನಾಡಿ, ಜಾತಿ ಮತ್ತು ಧರ್ಮವನ್ನು ಒಡೆದು ಆಳುವ ನೀತಿಯನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ದೂರಿದರು.

ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ ತಮ್ಮ ರಾಜಕೀಯ ಜೀವನದಲ್ಲಿ ಇಷ್ಟು ಭ್ರಷ್ಟ ಹಾಗೂ ಕೆಟ್ಟ ಸರ್ಕಾರ ಎಂದು ನೋಡಿಲ್ಲ ಎಂದು ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ,ವಿಧಾನಪರಿಷತ್ ಸದಸ್ಯ ವೈ.ಎಸ್.ವಿ.ದತ್ತ, ಎಂ.ಶ್ರೀನಿವಾಸ್,ಪಿ.ಜಿ.ಆರ್. ಸಿಂಧ್ಯಾ, ಅಜೀಮ್, ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋ ಜೇಗೌಡ, ಜೆಡಿಎಸ್ ರಾಜ್ಯ ಘಟಕ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ, ಜಿಲ್ಲಾಧ್ಯಕ್ಷ ಎಚ್.ಎಚ್.ದೇವರಾಜ್ಇದ್ದರು.

ಹುಲಿ ಯೋಜನೆಗೆ ಹೋರಾಟ: ಕುಮಾರಸ್ವಾಮಿ
ಎನ್.ಆರ್. ಪುರ: ಬಿಜೆಪಿ ಹುಲಿ ಯೋಜನೆಗೆ ಪ್ರಸ್ತಾಪ ಸಲ್ಲಿಸಿ ಜನರನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸಿದರೆ ಪ್ರಾಣಕೊಟ್ಟಾದರೂ ಜನರನ್ನು ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಇಲ್ಲಿನ ಹಳೆ ಕೆನರಾ ಬ್ಯಾಂಕ್ ಪಕ್ಕ ಶನಿವಾರ ಸಂಜೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ನಡೆದ 20 ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಒಂದು ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಹಾಗಾಗಿ ಬಿಜೆಪಿ ಸೋಲಿಸಲು ಅವಕಾಶವಿರುವುದು ಜೆಡಿಎಸ್ಗೆ ಮಾತ್ರ ಎಂದರು. ಶಾಸಕರಾದ ಬಸವರಾಜ ಹೊರಟ್ಟಿ, ಎಂ.ಶ್ರೀನಿವಾಸ್, ಪಿ.ಜಿ.ಆರ್.ಸಿಂಧ್ಯಾ, ಅಭ್ಯರ್ಥಿ ಎಸ್.ಎಲ್.ಬೋಜೇಗೌಡ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಟಿ.,ರಾಜೇಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.