ರೈತರಿಗೆ ದ್ರೋಹ ಬಗೆದವರಿಗೆ ಉಳಿಗಾಲ ಇಲ್ಲ
ಚಿಕ್ಕಮಗಳೂರು: ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದೆ ಅಧಿಕಾರಕ್ಕಾಗಿ ಒಳಜಗಳದಲ್ಲಿ ಮಗ್ನವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ರೈತ ಸಂಘ ನಿರಂತರ ಹೋರಾಟ ನಡೆಸಲಿದೆ ಎಂದು ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್.ಬಸವರಾಜ್ ತಿಳಿಸಿದರು.
ನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಆರ್. ಆರ್.ಮಹೇಶ್ ಅವರನ್ನು ಅಭಿನಂದಿಸಿ ಮಾತನಾಡಿದರು.
`ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲವಾಗುವಂತೆ ನಿರಂತರ ಹೋರಾಟ ಮಾಡಬೇಕು. ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಬೇಕು. ರೈತ ಸಂಘದ ಹೋರಾಟವೆಂದರೆ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಿರಬೇಕು. ಯಾವುದೇ ಮಧ್ಯವರ್ತಿಗಳ ಪ್ರಭಾವಕ್ಕೂ ಒಳಗಾಗದೇ ರೈತರಿಗೆ ಉತ್ತಮ ದರ ದೊರಕಿಸಿಕೊಡಬೇಕು. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ~ ಎಂದರು. ನೂತನ ಜಿಲ್ಲಾ ಅಧ್ಯಕ್ಷ ಆರ್.ಆರ್.ಮಹೇಶ್ ಮಾತನಾಡಿ, ರೈತರಿಗೆ ಅನ್ಯಾಯವಾದರೆ ನ್ಯಾಯ ದೊರೆಯುವವರೆಗೂ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ್, ಉಪಾಧ್ಯಕ್ಷರಾಗಿ ಸಿದ್ದಪ್ಪ, ರಾಮೇಗೌಡ್ರು, ಕಾರ್ಯದರ್ಶಿಯಾಗಿ ಲೋಹಿತ್, ಜಿಲ್ಲಾ ಸಂಚಾಲಕರಾಗಿ ಅರುಣ್ ಕುಮಾರ್, ಎಂ.ಮಹೇಶ್ ಅವರನ್ನು ಆಯ್ಕೆ ಮಾಡಲಾಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.