ಭಾನುವಾರ, ಜೂನ್ 13, 2021
22 °C

ರೈತರಿಗೆ ಪಿಂಚಣಿಗೆ ಆಗ್ರಹಿಸಿ ಜಾಥಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೈತರಿಗೆ ಪಿಂಚಣಿಗೆ ಆಗ್ರಹಿಸಿ ಜಾಥಾ

ತುಮಕೂರು: ಅರವತ್ತು ವರ್ಷ ತುಂಬಿದ ರೈತರು, ಕೃಷಿ ಅವಲಂಬಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ, ರಾಜ್ಯ ಕೃಷಿ ಕಾರ್ಮಿಕ ಸಂಘ, ರಾಜ್ಯ ಸ್ತ್ರೀಶಕ್ತಿ ಮತ್ತು ಮಹಿಳಾ ಸ್ವಸಹಾಯ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ಜಾಥಾ ನಡೆಯಿತು.ನಗರದ ಟೌನ್‌ಹಾಲ್ ವೃತ್ತದಲ್ಲಿ ಜಮಾಯಿಸಿದ ರೈತರು, ಈಗಾಗಲೇ ತಮಿಳುನಾಡು, ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರಗಳು ರೈತರ ಪಿಂಚಣಿ ಯೋಜನೆ ಜಾರಿಗೊಳಿಸಿವೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಹಿರಿಯ ರೈತರಿಗೆ, ರೈತ ಕಾರ್ಮಿಕರಿಗೆ ಪಿಂಚಣಿ ನೀಡಬೇಕು ಎಂದು ಒತ್ತಾಯಿಸಿದರು.

 

ಸ್ತ್ರೀಶಕ್ತಿ, ಮಹಿಳಾ ಸ್ವಸಹಾಯ ಸಂಘಗಳಿಗೆ ರೂ. 10 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡಬೇಕು. ಸ್ತ್ರೀಶಕ್ತಿ ಸಂಘಗಳು ಉತ್ಪಾದಿಸಿದ ವಸ್ತುಗಳನ್ನು ಸರ್ಕಾರವೇ ಖರೀದಿಸಬೇಕು ಎಂದು ಆಗ್ರಹಿಸಿದರು.ಅಖಿಲ ಭಾರತ ಕಿಸಾನ್ ಸಂಘದ ಸಂಚಾಲಕ ಎನ್.ಶಿವಣ್ಣ, ಎಐಟಿಯುಸಿ ಜಿಲ್ಲಾ ಘಟಕದ ಉಪಾಧ್ಯಕ್ಷ ಕಂಬೇಗೌಡ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಮುಖಂಡರಾದ ಕುಮಾರ್ ಸಿಂಗ್, ಕಲ್ಲಪ್ಪ, ಬಸವರಾಜು, ಗೌರಮ್ಮ, ಕರಿಯಣ್ಣ ಇನ್ನಿತರರು ಇದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.