ರೈತರಿಗೆ ಬಡ್ಡಿರಹಿತ ಸಾಲ ನೀಡಲು ಆಗ್ರಹ

7

ರೈತರಿಗೆ ಬಡ್ಡಿರಹಿತ ಸಾಲ ನೀಡಲು ಆಗ್ರಹ

Published:
Updated:

ಮೈಸೂರು: ರೈತರಿಗೆ ಬಡ್ಡಿರಹಿತ ಬೆಳೆ ಸಾಲ ನೀಡಬೇಕು. ಕೈಗಾರೀಕರಣ ಹೆಸರಿ ನಲ್ಲಿ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವುದನ್ನು ಕೈಬಿಡ ಬೇಕು ಎಂಬ ಪ್ರಮುಖ ನಿರ್ಣಯಗ ಳೊಂದಿಗೆ ಅಖಿಲ ಭಾರತೀಯ ಪ್ರತಿನಿಧಿ ಸಭಾ ಭಾನುವಾರ ಮುಕ್ತಾಯಗೊಂಡಿತು.ನಗರದ ದಸರಾ ವಸ್ತುಪ್ರದರ್ಶನ ಆವರಣದ ಮೈದಾನದಲ್ಲಿ ಭಾರತೀಯ ಕಿಸಾನ್ ಸಂಘದ ವತಿಯಿಂದ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಸಭೆಯಲ್ಲಿ ಕರ್ನಾಟಕ, ಉತ್ತರ ಪ್ರದೇಶ, ಮಧ್ಯಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಎರಡು ಸಾವಿರ ಪ್ರತಿನಿಧಿ ಗಳು, ಐದು ಸಾವಿರ ಪದಾಧಿಕಾರಿ ಗಳು, ಕಾರ್ಯಕರ್ತರು ಭಾಗವಹಿಸಿದ್ದರು.ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಅನಂತರಾಮ್ ರಾಮಚಂದ್ರ ಮುರಕುಟೆ ಮಾತನಾಡಿ, `ಸಂಪನ್ನ ರೈತ, ಸ್ವಾವಲಂಬಿ ಗ್ರಾಮ, ಸಮರ್ಥ ಭಾರತ ಎಂಬ ಧ್ಯೇಯದೊಂದಿಗೆ ಭಾರತೀಯ ಕಿಸಾನ್ ಸಂಘ ಕಾರ್ಯ ನಿರ್ವಹಿಸು ತ್ತಿದೆ. ಮುಂದಿನ 6 ತಿಂಗಳಿನಲ್ಲಿ 77 ಲಕ್ಷ ರೈತರನ್ನು ಸದಸ್ಯರನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ರೈತರ ಅಭಿ ವೃದ್ಧಿಗಾಗಿ ಕಿಸಾನ್ ಸಂಘ ದೇಶದಾ ದ್ಯಂತ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ರೈತರಿಗೆ ತಿಳಿವಳಿಕೆ ನೀಡುತ್ತಿದೆ~ ಎಂದು ಹೇಳಿದರು.`ರೈತರು ಬೆಳೆದ ಎಲ್ಲ ಬೆಳೆಗಳಿಗೂ ಶೇ.20 ರಷ್ಟು ಹೆಚ್ಚುವರಿ ಬೆಂಬಲ ಬೆಲೆ ನೀಡಬೇಕು. ಸರ್ಕಾರವೇ ಬೆಳೆಯನ್ನು ಖರೀದಿಸಬೇಕು. ದೇಶದಲ್ಲಿ ಪ್ರತಿ ದಿನ  ಸರಾಸರಿ 16  ರೈತರು ಆತ್ಮಹತ್ಯೆ ಮಾಡಿ ಕೊಳ್ಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗವು ಸ್ವಯಂ ದೂರು ದಾಖಲಿಸಿಕೊಳ್ಳಬೇಕು. ಸರ್ಕಾ ರದಿಂದ ಮೃತ ರೈತನ ಕುಟುಂಬಕ್ಕೆ ಪರಿಹಾರ ಕಲ್ಪಿಸಲು ಮುಂದಾ ಗಬೇಕು~ ಎಂದು ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯ ದರ್ಶಿ ಪ್ರಭಾಕರ್ ಕೇಳ್ಕರ್, ರಾಜ್ಯಾಧ್ಯಕ್ಷ ಯಳಂದೂರು ರಂಗ ನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕೆ.ರಮೇಶ್, ಭಾರತೀಯ ಕಿಸಾನ್ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಐ.ಎನ್.ಬಸವೇಗೌಡ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry