ಯಲಹಂಕ: ‘ಕರ್ನಾಟಕ ಗೃಹಮಂಡಳಿ ವತಿಯಿಂದ ವಶಪಡಿಸಿಕೊಂಡಿರುವ ಜಮೀನುಗಳಿಗೆ ಹದಿನೈದು ದಿನಗಳ ಒಳಗಾಗಿ ಬೆಲೆ ನಿಗದಿಪಡಿಸಿ, ಶೀಘ್ರದಲ್ಲಿಯೇ ಪರಿಹಾರ ವಿತರಿಸಲಾಗುವುದು’ ಎಂದು ವಸತಿ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.

ಕರ್ನಾಟಕ ಗೃಹಮಂಡಳಿಯಿಂದ ಬೆಂಗಳೂರು ಉತ್ತರ ತಾಲ್ಲೂಕಿನ ಅದ್ದೆ ವಿಶ್ವನಾಥಪುರ ಮತ್ತು ಶ್ರೀರಾಮನಹಳ್ಳಿ ಗ್ರಾಮಗಳಲ್ಲಿ ವಶಪಡಿಸಿಕೊಂಡಿರುವ ಕೃಷಿ ಜಮೀನುಗಳಿಗೆ ಬೆಲೆ ನಿಗದಿಪಡಿಸುವ ಸಂಬಂಧ ಏರ್ಪಡಿಸಲಾಗಿದ್ದ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

‘ಆರು ತಿಂಗಳ ಒಳಗಾಗಿ ಬಡಾವಣೆ ನಿರ್ಮಾಣ ಮಾಡಿ, ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಅಲ್ಲದೆ ನಿರ್ಮಾಣ ಮಾಡಲು ಉದ್ದೇಶಿಸಿರುವ ಈ ಬಡಾವಣೆಯಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗುವುದು’ ಎಂದು ತಿಳಿಸಿದರು.

‘ಮುಂದಿನ ದಿನಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೊಳಪಟ್ಟ ಗ್ರಾಮಗಳಲ್ಲಿಯೆ ರೈತರ ಸಭೆ ನಡೆಸಿ, ಯೋಜನೆಗಳನ್ನು ರೂಪಿಸಬೇಕು.ಪರಿಹಾರ ವಿತರಣೆ ವಿಚಾರದಲ್ಲಿ ಭೂದಾಖಲೆಗಳನ್ನು ಸಂಬಂಧಿಸಿದ ಅಧಿಕಾರಿಗಳೇ ಕಂದಾಯ ಕಛೇರಿಗಳಿಂದ ಪಡೆದು ಪರಿಹಾರ ವಿತರಣೆ ವಿಳಂಬವಾಗದಂತೆ ನೋಡಿಕೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಆದೇಶ ನೀಡಿದರು.

‘ಗೃಹಮಂಡಳಿ ಸ್ವಾಧೀನಪಡಿಸಿಕೊಂಡಿರುವ ಭೂಮಿಯಿಂದ ಯಾವುದೇ ಕಾರಣಕ್ಕೂ ಪ್ರಭಾವಿ ವ್ಯಕ್ತಿಗಳ ಭೂಮಿಯನ್ನು ಕೈಬಿಡುವ ವಿಚಾರ ಸರ್ಕಾರದ ಮುಂದೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ ‘ಸರ್ಕಾರ ಯೋಜನೆಗಾಗಿ ವಶಪಡಿಸಿಕೊಂಡ ಜಮೀನುಗಳಿಗೆ ಬೆಲೆ ನಿಗದಿಪಡಿಸಿ, ಸೂಕ್ತ ಪರಿಹಾರ ನೀಡಲು ವಿಳಂಬ ದೋರಣೆ ಅನುಸರಿಸಿರುವುದೆ ಸಮಸ್ಯೆಗಳಿಗೆ ಕಾರಣವಾಗಿದೆ. ಆದ್ದರಿಂದ ರೈತರಿಗೆ ತಕ್ಷಣ ಹೆಚ್ಚಿನ ಪರಿಹಾರ ನಿಗದಿಪಡಿಸಬೇಕು’ ಎಂದು ಮನವಿ ಮಾಡಿದರು.

‘ಸರ್ಕಾರ ಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪ್ರಸ್ತುತ ಮಾರುಕಟ್ಟೆ ಬೆಲೆ ಅಥವಾ ಅಭಿವೃದ್ಧಿಪಡಿಸಿದ ಭೂಮಿಯಲ್ಲಿ ಶೇ.60ರಷ್ಟು ಭಾಗವನ್ನು ರೈತರಿಗೆ ನೀಡಬೇಕು’ ಎಂದು ರೈತ ಮುಖಂಡರು ಒತ್ತಾಯಿಸಿದರು.

ಕರ್ನಾಟಕ ಗೃಹಮಂಡಳಿ ಆಯುಕ್ತ ದ್ಯಾಬೇರಿ, ಮುಖ್ಯ ಎಂಜಿನಿಯರ್ ಬೀಸೇಗೌಡ, ಬೆಂಗಳೂರು ಉತ್ತರ ಹೆಚ್ಚುವರಿ ತಹಶೀಲ್ದಾರ್ ಬಿ.ವೆಂಕಟೇಶ್, ವಿಶೇಷ ಭೂಸ್ವಾಧೀನ ಅಧಿಕಾರಿ ರಾಜಮ್ಮ, ರೈತ ಮುಖಂಡರಾದ ವಿ.ಆರ್.ನಾರಾಯಣರೆಡ್ಡಿ, ಕಡತನಮಲೆ ಸತೀಶ್, ಅದ್ದೆ ಹರೀಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.