ಬುಧವಾರ, ಜನವರಿ 22, 2020
20 °C

ರೈತರ ಆತ್ಮಹತ್ಯೆ ಪ್ರಮಾಣ ಇಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ರೈತರ ಆತ್ಮಹತ್ಯೆ ಪ್ರಮಾಣ ಹಿಂದಿನ ವರ್ಷಕ್ಕೆ ಹೋಲಿಸಿದರೆ ಕಡಿಮೆಯಾಗಿದೆ. ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ ಮತ್ತು ಕೇರಳ­ದಂತಹ ಕೆಲವು ರಾಜ್ಯಗಳಲ್ಲಿ ಈ ಪ್ರಮಾಣ ಏರಿಕೆಯಾಗಿದೆ.2012ರಲ್ಲಿ 13,754 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, 2011ರಲ್ಲಿ  14,027 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಕೃಷಿ ಖಾತೆ ರಾಜ್ಯ ಸಚಿವ ತಾರೀಖ್‌ ಅನ್ವರ್‌ ರಾಜ್ಯಸಭೆಗೆ ತಿಳಿಸಿದ್ದಾರೆ.ರೈತರ ಆತ್ಮಹತ್ಯೆ ಕಡಿಮೆಯಾ­ಗಿರುವ ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕೌಟುಂಬಿಕ ಸಮಸ್ಯೆ, ದಿವಾಳಿ­ತನ ಇತ್ಯಾದಿ ಆತ್ಮಹತ್ಯೆಗೆ ಕಾರಣ ಎಂದು ಸಚಿವರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)