ಮಂಗಳವಾರ, ಅಕ್ಟೋಬರ್ 22, 2019
21 °C

ರೈತರ ಕಾರ್ಯಕ್ರಮ ಪ್ರಸಾರ ಮಾಡಿ

Published:
Updated:

ಇತ್ತೀಚೆಗೆ ಖಾಸಗಿ ಟಿ. ವಿ. ವಾಹಿನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಎಲ್ಲ ವಾಹಿನಿಗಳು ಸುದ್ದಿ ಮತ್ತು ಮನರಂಜನೆಗೆ ಹೆಚ್ಚಿನ ಒತ್ತು ನೀಡಿವೆ. ಆದರೆ ದೇಶದ ಬೆನ್ನೆಲುಬಾದ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ ಇತ್ಯಾದಿ ಬಹುಸಂಖ್ಯಾತ ಜನರ ವೃತ್ತಿಗೆ ಸಂಬಂಧಿಸಿದ ಮಾಹಿತಿಗಳನ್ನು ನೀಡುವ ವಿಷಯದಲ್ಲಿ ವಿಫಲವಾಗಿವೆ.ಆದರೆ ಮುದ್ರಣ ಮಾಧ್ಯಮಗಳು ಈ ವಿಷಯದಲ್ಲಿ ಮುಂದಿವೆ. ಟಿವಿ ಕಾರ್ಯಕ್ರಮಗಳ ಭರಾಟೆಯಲ್ಲಿ  ನಮ್ಮ ರೈತರು ರೇಡಿಯೊ ಗಳಲ್ಲಿ `ಕೃಷಿ ಪಾಠ~ ಕಾರ್ಯಕ್ರಮ ಕೇಳುವುದನ್ನು ಮರೆತಿದ್ದಾರೆ. ಹೀಗಾಗಿ ರೈತರ ಹಿತದೃಷ್ಟಿಯಿಂದ ಕನ್ನಡ ದೃಶ್ಯ ಮಾಧ್ಯಮಗಳು ಕೂಡ ರೈತರಿಗೆ ಉಪಯುಕ್ತವಾದ ಮಾಹಿತಿ ನೀಡುವಂತಹ ಕಾರ್ಯಕ್ರಮ ರೂಪಿಸಿ ಬಿತ್ತರಿಸಬೇಕು ಎಂದು ರೈತರ ಪರವಾಗಿ ಮನವಿ ಮಾಡಿಕೊಳ್ಳುತ್ತೇನೆ.

- ಕಂಡಕ್ಟರ್ ರಾಜು, ಗುಬ್ಬಿ

 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)