ಭಾನುವಾರ, ಸೆಪ್ಟೆಂಬರ್ 15, 2019
23 °C

ರೈತರ ಮೇಲೆ ಗುಂಡು: ತನಿಖೆಗೆ ಆದೇಶ

Published:
Updated:

ಮುಂಬೈ (ಪಿಟಿಐ): ಮೂವರು ರೈತರನ್ನು ಬಲಿ ತೆಗೆದುಕೊಂಡಿದ್ದ ಮಾವಲ್ ಗೋಲಿಬಾರ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಗೆ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಎಂ.ಜಿ. ಗಾಯಕವಾಡ್ ಅವರನ್ನು ನೇಮಕ ಮಾಡಿದೆ.ಮೂರು ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Post Comments (+)