ಸೋಮವಾರ, ಮೇ 17, 2021
21 °C

ರೈತರ ಸಮಸ್ಯೆಗೆ ಸರ್ಕಾರ ಸ್ಪಂದಿಸದಿದ್ದರೆ ಹೋರಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಡಗೋಡ: ಯಲ್ಲಾಪುರ ಕ್ಷೇತ್ರದಲ್ಲಿ ಜನ ಹೆಚ್ಚಿನ ಪ್ರಮಾಣದಲ್ಲಿ ಜಾತ್ಯತೀತ ಜನತಾದಳವನ್ನು ಬೆಂಬಲಿಸಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮುಖಂಡ ಡಿ.ಅನಿಲಕುಮಾರ ತಿಳಿಸಿದರು.ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರ ಹಾಗೂ ಬಡವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಕ್ಷೇತ್ರಾದ್ಯಂತ ಪಕ್ಷದ ಕಚೇರಿಗಳನ್ನು ತೆರೆಯಲಾಗಿದೆ. ಇದರಿಂದ ಜನಸಾಮಾನ್ಯರ ಸಮಸ್ಯೆ ಬಗೆಹರಿಸಲು ಅನುಕೂಲವಾಗುತ್ತದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಮುಖಂಡರು ಈಗಾಗಲೇ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದು ಪಕ್ಷಕ್ಕೆ ಉತ್ತಮ ಭವಿಷ್ಯವಿದೆ. ತಾಲ್ಲೂಕಿನ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನೋಡಿದರೆ ಇಂತಹ ಪರಿಸ್ಥಿತಿಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತ ಇದ್ದರೆ ಒಳ್ಳೆಯದಾಗುತ್ತಿತ್ತು ಎಂದು ಜನರ ಭಾವನೆಯಾಗಿದೆ ಎಂದ ಅವರು ರೈತರ ಸಮಸ್ಯೆಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಕಾರ್ಯಕರ್ತರೊಡನೆ ಹೋರಾಟ ಮಾಡಲಾಗುವುದು ಎಂದರು.ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಬಸವರಾಜ ಓಶೀಮಠ ಅವರ ಹೆಸರನ್ನು ಈಗಾಗಲೇ ಪಕ್ಷದ ವರಿಷ್ಠರಿಗೆ ತಿಳಿಸಲಾಗಿದ್ದು ಹದಿನೈದು ದಿನಗಳಲ್ಲಿ ಜಿಲ್ಲಾಧ್ಯಕ್ಷರ ಘೋಷಣೆಯಾಗುವ ಸಂಭವವಿದೆ ಎಂದರು.ಬಸವರಾಜ ಓಶೀಮಠ, ರಾಮಣ್ಣ ಕುನ್ನೂರ, ಅಣ್ಣಪ್ಪ ಪಾಟೀಲ, ಮುನಾಫ ಮಿರ್ಜಾನಕರ, ಪಿ.ಜಿ.ಭಟ್ಟ, ಮಾಧವ ಇಳಗೇರ, ಎಂ.ಎನ್.ದುಂಡಶಿ, ಶಿವಳ್ಳಿ ಮಾಧವಿ, ಆಶಾ ಶೇಖ, ರುಕ್ಮೀಣಿ ಹುಲ್ಮಣಿ ಇತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.