ಗುರುವಾರ , ಮೇ 13, 2021
38 °C

ರೈತರ ಸಮಸ್ಯೆ: ಸಭೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ರಸಗೊಬ್ಬರದ ಕೊರತೆ ರಾಜ್ಯದಲ್ಲಿ ತೀವ್ರವಾಗಿದೆ. ಆದರೆ, ಕೃಷಿ ಇಲಾಖೆಯ ನಿರ್ಲಕ್ಷದಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಕೆಪಿಸಿಸಿಯ ಕಿಸಾನ್ ಮತ್ತು ಖೇತ್ ಮಜ್ದೂರ್ ಘಟಕ ಆರೋಪಿಸಿದೆ.`ರೈತರ ಬೆಳೆಗೆ ಸೂಕ್ತ ಬೆಲೆ ನಿಗದಿ, ರೈತರ ಪಂಪ್‌ಸೆಟ್‌ಗೆ ಸಮರ್ಪಕ ವಿದ್ಯುತ್ ಪೂರೈಕೆ, ಕೀಟನಾಶಕ ಪೂರೈಕೆ ಸಮಸ್ಯೆ, ಶೇಕಡ 1ರ ಬಡ್ಡಿ ದರದಲ್ಲಿ ರೈತರಿಗೆ ಸಾಲ ನೀಡಿಕೆ ಮತ್ತು ರೈತರ ಆತ್ಮಹತ್ಯೆ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಸರ್ವಪಕ್ಷಗಳು ಮತ್ತು ರಾಜ್ಯದ ಎಲ್ಲ ಜಿಲ್ಲೆಗಳ ರೈತಮುಖಂಡರ ಸಭೆ ಕರೆಯಬೇಕು~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರನ್ನು ಘಟಕದ ಉಪಾಧ್ಯಕ್ಷ ಆನಂದ ಕುಮಾರ್ ಒತ್ತಾಯಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.