ಶನಿವಾರ, ಜೂನ್ 19, 2021
22 °C

ರೈತರ ಸಮಿತಿ ರಚನೆ: ಸಿಎಂಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೃಷಿ ಉತ್ಪನ್ನಗಳಿಗೆ ಬೆಲೆ ನಿರ್ಧರಿಸಲು ರೈತರ ಸಮಿತಿ ರಚಿಸಬೇಕು, ಉದ್ಯೋಗ ಖಾತರಿ ಯೋಜನೆಯ ಹಣವನ್ನು ಕೃಷಿಯ ಎಲ್ಲ ಚಟುವಟಿಕೆಗಳಿಗೂ ಬಳಸಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಕೆಪಿಸಿಸಿ ಕಿಸಾನ್ ಘಟಕ, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಸಲ್ಲಿಸಿತು.ಕಿಸಾನ್ ಘಟಕದ ಹಿರಿಯ ಉಪಾಧ್ಯಕ್ಷ ಆನಂದ್ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಇಲ್ಲಿ ಭೇಟಿ ಮಾಡಿದ ಘಟಕದ ಸದಸ್ಯರು, ವಿವಿಧ ಬೇಡಿಕೆಗಳಿರುವ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರದಲ್ಲಿ ಇರುವ ಅಂಶಗಳನ್ನು ಮುಂಬರುವ ಬಜೆಟ್‌ನಲ್ಲಿ ಸೇರಿಸಬೇಕು ಎಂದು ಕೋರಿದರು.ಕೃಷಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಸಾವಿಗೀಡಾಗುವ ರೈತರ ಜಾನುವಾರುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಮನವಿಗಳು ಇದರಲ್ಲಿ ಸೇರಿವೆ. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಈ ಕುರಿತು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.