ಭಾನುವಾರ, ಮೇ 9, 2021
26 °C

ರೈತರ ಸಾಲ ಮನ್ನಾ ಪರಿಶೀಲನೆ: ಸಿ.ಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: `ರಾಜ್ಯದ ರೈತರ ಸಾಲ ಮನ್ನಾ ಮಾಡುವ ವಿಷಯ ಪರಿಶೀಲನೆಯಲ್ಲಿದೆ. ಬರದಿಂದ ತತ್ತರಿಸಿರುವ ಜಾನುವಾರುಗಳಿಗೆ ಶೇ 50ರ ರಿಯಾಯಿತಿ ದರದಲ್ಲಿ ಮೇವು ವಿತರಿಸಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.ಬರ ಪೀಡಿತ ಜಿಲ್ಲೆಯ ಕೆಲ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ, ರೈತರಿಂದ ಅಹವಾಲು ಆಲಿಸಿದ ನಂತರ ಅವರು ಈ ಮಾಹಿತಿ ನೀಡಿದರು.`ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಲು ಅಗತ್ಯವಿರುವೆಡೆ ಮೇವು ಬ್ಯಾಂಕ್ ಸ್ಥಾಪಿಸಲಾಗುತ್ತಿದೆ. ಸಾಗಣೆ ಮತ್ತು ಖರೀದಿ ವೆಚ್ಚ ಸೇರಿದಂತೆ ಶೇ 50 ರಿಯಾಯಿತಿ ದರದಲ್ಲಿ ರೈತರಿಗೆ ಮೇವು ವಿತರಿಸಲಾಗುವುದು. ಅಗತ್ಯಬಿದ್ದರೆ ಹೋಬಳಿ ಮಟ್ಟದಲ್ಲಿಯೂ ಮೇವು ಬ್ಯಾಂಕ್ ಆರಂಭಿಸಲಾಗುವುದು. ಇದಕ್ಕೆ ಮಂಗಳವಾರವೇ ಸರ್ಕಾರಿ ಆದೇಶ ಹೊರಡಿಸಲಾಗಿದೆ~ ಎಂದರು.`ರೈತರು ಪಡೆದ ಸಾಲವನ್ನು ಯಾವುದೇ ಕಾರಣಕ್ಕೂ ಬಲವಂತದಿಂದ ವಸೂಲಿ ಮಾಡಬಾರದು ಎಂಬ ಸೂಚನೆಯನ್ನು ಎಲ್ಲ ಬ್ಯಾಂಕ್‌ಗಳಿಗೆ ನೀಡಲಾಗಿದೆ. ಅಲ್ಪಾವಧಿ ಮತ್ತು ಮಧ್ಯಮಾವಧಿ ಸಾಲವನ್ನು ದೀರ್ಘಾವಧಿಯನ್ನಾಗಿ ಪರಿವರ್ತಿಸಿ, ಮರು ಹೊಂದಾಣಿಕೆ ಮಾಡಲಾಗಿದೆ. ಹೀಗಾಗಿ ಸದ್ಯ ರೈತರಿಗೆ ಸಾಲ ಮರುಪಾವತಿಯ ಚಿಂತೆ ಇಲ್ಲ~ ಎಂದು ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.