ಹಿರೇಕೆರೂರ: ಬರಗಾಲ ಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿ ರುವ ಸರ್ಕಾರ ಕೂಡಲೇ ಬರ ಪರಿಹಾರ ಕಾಮಗಾರಿ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘದ (ಪ್ರೊ.ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಸೋಮವಾರ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಜ್ಯ ರೈತಸಂಘದ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ ಮಾತನಾಡಿ, ಭೀಕರ ಬರಗಾಲದ ಕಾರಣದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಕೆಲಸಕ್ಕೆ ಗುಳೇ ಹೋಗುವ ಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರ ಬರಗಾಲ ಪರಿಹಾರ ಕಾಮಗಾರಿಯನ್ನು ಕೈಗೊಳ್ಳುವುದನ್ನು ಬಿಟ್ಟು ಅಧಿಕಾರ ಉಳಿಸಿಕೊಳ್ಳಲು ಹೋರಾಟ ನಡೆಸಿದೆ. ರಾಜ್ಯ ಬಿಜೆಪಿ ಮುಖಂಡರು ರೈತರ ಕಷ್ಟ ಮರೆತು ಕುರ್ಚಿಗಾಗಿ ರೆಸಾರ್ಟ್ ರಾಜಕಾರಣ ಆರಂಭಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭೀಕರ ಬರಗಾಲವಿದ್ದರೂ ಬ್ಯಾಂಕು ಗಳು ರೈತರ ಸಾಲ ವಸೂಲಿಗೆ ನೋಟಿಸು ನೀಡುತ್ತಿವೆ. ಕೂಡಲೇ ಇದನ್ನು ನಿಲ್ಲಿಸಬೇಕು. ಸರ್ಕಾರ ಸಾಲಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು. ಬರಗಾಲ ಪರಿಹಾರ ಕಾಮಗಾರಿ ಆರಂಭಿಸಲು ತಕ್ಷಣ ಹಣ ಬಿಡುಗಡೆ ಮಾಡಬೇಕು. ವಿದ್ಯುತ್ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯವಾಗುತ್ತಿದೆ.

ಇದರಿಂದ ಗ್ರಾಮೀಣ ಭಾಗದಲ್ಲಿ ಕುಡಿ ಯುವ ನೀರಿಗಾಗಿ ಜನತೆ ಪರದಾಡು ತ್ತಿದ್ದಾರೆ. ನೀರಾವರಿ ಮಾಡಿರುವ ರೈತರು ತೊಂದರೆ ಎದುರಿಸುತ್ತಿದ್ದಾರೆ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರೈತಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ ದೂದೀಹಳ್ಳಿ ಮಾತನಾಡಿ, ಕಂದಾಯ ಇಲಾಖೆ ಹಾಗೂ ಭೂಮಾಪನ ಇಲಾಖೆಯಲ್ಲಿ ರೈತರ ಶೋಷಣೆ ನಡೆಯುತ್ತಿದೆ. ರೈತರಿಗೆ ದಾಖಲೆಗಳನ್ನು ನೀಡಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ ಇಸ್ಮಾಯಿಲ್ಸಾಬ್ ಶಿರಹಟ್ಟಿ ಮನವಿ ಸ್ವೀಕರಿಸಿ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ತಾಲ್ಲೂಕನ್ನು ಬರ ಪೀಡಿತ ಎಂದು ಘೋಷಣೆ ಮಾಡ ಲಾಗಿದೆ. ಈಗಾಗಲೇ ತಾಲ್ಲೂಕಿನಲ್ಲಿ 19 ಬರಪರಿಹಾರ ಕಾಮಗಾರಿಗಳಿಗೆ ಜಿಲ್ಲಾಧಿಕಾರಿಗಳು ಮಂಜೂರಾತಿ ನೀಡಿ ್ದದಾರೆ. ಕುಡಿಯುವ ನೀರು ಸಮರ್ಪಕ ವಾಗಿ ಪೂರೈಸಲು ತಾಲ್ಲೂಕಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ತಿರಸ್ಕೃತ ಗೊಂಡಿರುವ ಮಾಸಾಶನ ಕುರಿತು ಸಂಬಂಧಪಟ್ಟವರಿಂದ ಅರ್ಜಿ ಪಡೆದು ಪರಿಶೀಲಿಸಿ ಅರ್ಹರಿಗೆ ಮಂಜೂರಾತಿ ನೀಡುತ್ತಿದ್ದೇವೆ ಎಂದು ಹೇಳಿದರು.

ರಾಜ್ಯ ಕಾರ್ಯಾಧ್ಯಕ್ಷ ಕೆ.ಟಿ. ಗಂಗಾಧರ, ಶರಣು ಕುಸಗೂರು, ಅಶೋಕ ಗೌಡ್ರ, ಮಲ್ಲನಗೌಡ ಸೊರ ಟೂರ, ಬಸವರಾಜ ಚಿಂದಿ, ರಾಜು ಕೂಗೂರ, ಎ.ಎ.ಬಣಕಾರ, ಕರವೇ ಅಧ್ಯಕ್ಷ ಗಿರೀಶ ಬಾರ್ಕಿ, ಗಿರೀಶ ನರೇಗೌಡ್ರ, ಬಿ.ಬಿ.ಕಿಚಡಿ, ಬಸವರಾಜ ಬಣಕಾರ, ಚಂದ್ರಗೌಡ ಪಾಟೀಲ, ಶಿವನಗೌಡ ಪಾಟೀಲ, ಮಲ್ಲೇಶ ಪೂಜಾರ, ರಂಗಪ್ಪ ತಳವಾರ, ಕನ್ನಪ್ಪ ಮಲ್ಲಕ್ಕನವರ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.