ಮಂಗಳವಾರ, ಜೂನ್ 22, 2021
26 °C

ರೈತ, ರೈತ ಮಹಿಳೆ ವಿಜ್ಞಾನಿ ಪ್ರಶಸ್ತಿ: ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಹೈದರಾಬಾದ್ ಕರ್ನಾಟಕ ಭಾಗದ ರೈತರ ಒಡನಾಡಿ ಎನಿಸಿಕೊಂಡಿರುವ ರಾಯಚೂರು ಕೃಷಿ ವಿಶ್ವವಿದ್ಯಾಲಯವು 2011-12ನೇ ಸಾಲಿನಿಂದ ಸಾಧಕ ರೈತರು ಮತ್ತು ರೈತ ಮಹಿಳೆಯರಿಗೆ ರೈತ ವಿಜ್ಞಾನಿ/ರೈತ ಮಹಿಳೆ ವಿಜ್ಞಾನಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿದೆ.ಬೀದರ, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ರೈತ ಬಾಂಧವರು ಈ ಪ್ರಶಸ್ತಿಗೆ ಅರ್ಹರಾಗಿದ್ದು, 2012ನೇ ಏಪ್ರಿಲ್ 3ನೇ ವಾರದಲ್ಲಿ ಜರುಗುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ಪ್ರಶಸ್ತಿ ಫಲಕ ಹಾಗೂ ನಗದು 50,000 ರೂಪಾಯಿ ಬಹುಮಾನವನ್ನು ಒಳಗೊಂಡಿರುತ್ತದೆ. ಈ ರೈತ ವಿಜ್ಞಾನಿ/ರೈತ ಮಹಿಳೆ ವಿಜ್ಞಾನಿ ಪ್ರಶಸ್ತಿಗೆ ಅರ್ಹರೆನಿಸಿಕೊಂಡಿರುವ ರೈತರು/ರೈತ ಮಹಿಳೆಯರು ಅರ್ಜಿ ನಮೂನೆಗಳನ್ನು ಕೃಷಿ ವಿಜ್ಞಾನ ಕೇಂದ್ರ, ಗುಲ್ಬರ್ಗ-94806 96315, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಭೀಮರಾಯನಗುಡಿ-94806 96335 ಇಲ್ಲಿ ಮಾ. 25ರೊಳಗೆ ಪಡೆದು, ಅದನ್ನು ಭರ್ತಿಮಾಡಿ ಮಾ. 30ರ ಸಾಯಂಕಾಲ 5 ಗಂಟೆಯೊಳಗೆ ವಿಸ್ತರಣಾ ನಿರ್ದೇಶಕರು, ಕೃಷಿ ವಿಶ್ವವಿದ್ಯಾಲಯ, ರಾಯಚೂರು-584102 ವಿಳಾಸಕ್ಕೆ ತಲುಪಿಸಬೇಕೆಂದು ಕೋರಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಮೇಲ್ಕಾಣಿಸಿದ ಸಂಸ್ಥೆಗಳ ಮುಖ್ಯಸ್ಥರನ್ನು ಅಥವಾ ವಿಸ್ತರಣಾ ನಿರ್ದೇಶಕರನ್ನು (94806 96313) ಸಂಪರ್ಕಿಸಬಹುದು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.