ಶುಕ್ರವಾರ, ಏಪ್ರಿಲ್ 16, 2021
31 °C

ರೈತ ಸಂಘದ ಮುಖಂಡ ರಮೇಶ ಗಡದಣ್ಣವರ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ ಗಡದಣ್ಣವರ (50) ಅನಾರೋಗ್ಯದಿಂದ ಶನಿವಾರ ನಿಧನರಾದರು.



ಮಿದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರು ಬೆಳಗಾವಿ ಕೆ.ಎಲ್.ಇ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.



ಅವರ ಸ್ವಗ್ರಾಮವಾದ ಮುಧೋಳ ತಾಲ್ಲೂಕಿನ ಬುದ್ನಿ ಪಿ.ಎಂ.ನಲ್ಲಿ ಭಾನುವಾರ ಮಧ್ಯಾಹ್ನ 1ಗಂಟೆಗೆ  ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.



ಅವರು 30 ವರ್ಷಗಳಿಂದ ರೈತ ಸಂಘದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ಅನೇಕ ರೈತ ಪರ ಹೋರಾಟದ ಮುಂದಾಳತ್ವ ವಹಿಸಿದ್ದರು.



 ಈ ಹಿಂದಿನ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ರೈತ ಸಂಘದಿಂದ ಸ್ಪರ್ಧಿಸಿ ಶಿರೋಳ ಕ್ಷೇತ್ರದಿಂದ ಆಯ್ಕೆಯಾಗಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.