ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ

7

ರೈಲಿಗೆ ಸಿಲುಕಿ ವಿದ್ಯಾರ್ಥಿ ಆತ್ಮಹತ್ಯೆ

Published:
Updated:

ಯಲಹಂಕ: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ರೈಲ್ವೆ ನಿಲ್ದಾಣದ ಸಮೀಪದ ಗಾಂಧಿ ನಗರದಲ್ಲಿ ನಡೆದಿದೆ.ಬಿಹಾರ ಮೂಲದ ಘೋಶಿ ಎಂಬುವರ ಪುತ್ರ ಅತುಲ್‌ರಂಜನ್ (21) ಆತ್ಮಹತ್ಯೆ ಮಾಡಿಕೊಂಡವರು.

ವಿದ್ಯಾನಗರದ ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ 6ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ಅತುಲ್‌ರಂಜನ್, ಬೆಳಿಗ್ಗೆ ಸುಮಾರು 11.30 ಗಂಟೆ ಹೊತ್ತಿನಲ್ಲಿ ಭುವನೇಶ್ವರ್- ಬೆಂಗಳೂರು ಮಾರ್ಗದ ಪ್ರಶಾಂತಿ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಪ್ರೇಮ ಪ್ರಕರಣ ಕಾರಣವಿರಬಹುದೆಂದು ಶಂಕಿಸಲಾಗಿದ್ದು, ಪೋಷಕರಿಗೆ ಘಟನೆಯ ಬಗ್ಗೆ ಮಾಹಿತಿ ನೀಡಲಾಗಿದೆ. ಶವವನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಯಲಹಂಕ ರೈಲ್ವೆ ಪೊಲೀಸ್ ಠಾಣೆಯ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಜಾನಕೀರಾಂ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry