ಬುಧವಾರ, ಮೇ 18, 2022
24 °C

ರೈಲಿನಲ್ಲಿ ಬಾಂಬ್: ಹುಸಿ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ (ಐಎಎನ್‌ಎಸ್): ದೆಹಲಿ-ತಿರುವನಂತಪುರ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಧೇಯ ಕರೆ ಬಂದ  ಹಿನ್ನೆಲೆಯಲ್ಲಿ ಮಾರ್ಗೋವಾ ರೈಲು ನಿಲ್ದಾಣದಲ್ಲಿ ಈ ರೈಲನ್ನು ತಡೆದು ತಪಾಸಣೆ ಮಾಡಿರುವ ಘಟನೆ ಬುಧವಾರ ನಡೆದಿದೆ.ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ರೈಲಿನ ಎಲ್ಲಾ ಬೋಗಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಆದರೆ ಬಾಂಬ್ ಅಥವಾ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಲಿಲ್ಲ ಎಂದು ಕೊಂಕಣ ರೈಲ್ವೆ ವಕ್ತಾರ ಬಾಬನ್ ಘತ್ಗೆ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.