ಪಾಟ್ನ (ಪಿಟಿಐ): ಶಂಕಿತ ನಕ್ಸಲರು ಬಿಹಾರದ ದನ್ಬಾದ್ ಇಂಟರ್ಸಿಟಿ ರೈಲಿನ ಮೇಲೆ ಗುಂಡಿನ ದಾಳಿ ನಡೆಸಿ ಒರ್ವ ರೈಲ್ವೆ ಪೊಲೀಸ್ ಸೇರಿದಂತೆ ಮೂವರನ್ನು ಹತ್ಯೆಮಾಡಿರುವ ಘಟನೆ ಗುರುವಾರ ನಡೆದಿದೆ.

ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಜುಮೈ ರೈಲು ನಿಲ್ದಾಣದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರು ಬಲವಂತವಾಗಿ ರೈಲನ್ನು ತಡೆದು ಈ ಕೃತ್ಯ ನಡೆಸಿದ್ದಾರೆ.

ರೈಲಿನಲ್ಲಿದ್ದ ರೈಲ್ವೆ ರಕ್ಷಣಾ ಪಡೆ (ಆರ್ಆರ್ಎಫ್) ಯೋಧರ ಮೇಲೆ ನಕ್ಸಲರು ದಾಳಿ ನಡೆಸಿದ್ದಾರೆ. ಇದಕ್ಕೆ ರೈಲ್ವೆ ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ. ಸುಮಾರು 30 ನಿಮಿಷಗಳ ಕಾಲ ನಡೆದ ಗುಂಡಿನ ಕಾಳಗದಲ್ಲಿ ಒರ್ವ ರೈಲ್ವೆ ಪೊಲೀಸ್ ಸೇರಿದಂತೆ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಮೂವರು ಪೊಲೀಸರು ಸೇರಿದಂತೆ ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಬಿಹಾರ ಪೊಲೀಸರು ಮಾಹಿತಿ ನೀಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೂರಕ್ಕೂ ಹೆಚ್ಚು ಜನರಿದ್ದ ನಕ್ಸಲರ ತಂಡ ಈ ಕೃತ್ಯವೆಸಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.