ಬುಧವಾರ, ಜೂನ್ 16, 2021
26 °C

ರೈಲುಗಳ ಮಧ್ಯೆ ಮುಖಾಮುಖಿ ಡಿಕ್ಕಿ:15 ಜನರ ಸಾವು, 60 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾರ್‌ಸಾ (ಎಎಫ್‌ಪಿ): ಪೋಲೆಂಡ್‌ನ ಜೆಕೊಸಿನಿ ನಗರದಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ 15 ಜನ ಮೃತಪಟ್ಟಿದ್ದು, 60 ಮಂದಿ ಗಾಯಗೊಂಡಿದ್ದಾರೆ.ಶನಿವಾರ ರಾತ್ರಿ ಘಟನೆ ನಡೆದಿದೆ. ತಡರಾತ್ರಿ ಆರಂಭವಾದ ರಕ್ಷಣಾ ಕಾರ್ಯಾಚರಣೆ ಭಾನುವಾರವೂ ಮುಂದುವರಿದಿತ್ತು. ಗಾಯಾಳುಗಳಲ್ಲಿ ಅರ್ಧಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.`ಇತ್ತೀಚಿನ ವರ್ಷಗಳಲ್ಲಿ ನಡೆದ ಭೀಕರ ರೈಲು ದುರಂತ ಇದಾಗಿದೆ~ ಎಂದು ಪ್ರಧಾನಿ ಡೊನಾಲ್ಡ್ ಟಸ್ಕ್ ಅವರು ಹೇಳಿದ್ದಾರೆ.ಡಿಕ್ಕಿಯಾದ ಎರಡೂ ರೈಲುಗಳಲ್ಲಿ ಒಟ್ಟು 350 ಜನ ಪ್ರಯಾಣಿಸುತ್ತಿದ್ದರು. ರೈಲುಗಳು ವಿರುದ್ಧ ದಿಕ್ಕಿನಿಂದ ಒಂದೇ ಹಳಿಯ ಮೇಲೆ ಬಂದಾಗ ಈ ದುರ್ಘಟನೆ ಸಂಭವಿಸಿದೆ. ತನಿಖೆಗೆ ಆದೇಶಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.