ರೈಲು ಸಂಚಾರ ರದ್ದು
ಹೈದರಾಬಾದ್, (ಪಿಟಿಐ): ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ನಡೆಸುತ್ತಿರುವ ತೆಲಂಗಾಣ ಜಂಟಿ ಕ್ರಿಯಾ ಸಮಿತಿ ಇದೇ 13ರಿಂದ 17ರವರೆಗೆ ರೈಲು ತಡೆ ಚಳವಳಿಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಮಧ್ಯ ರೈಲ್ವೆ (ಎಸ್ಸಿಆರ್) ಮೂರು ದಿನ 124 ಪ್ರಯಾಣಿಕರ ರೈಲುಗಳ ಸಂಚಾರ ರದ್ದುಪಡಿಸಿದೆ.
ಸ್ಥಳೀಯವಾಗಿ ಸಂಚರಿಸುವ ರೈಲುಗಳು ಸೇರಿದಂತೆ ಉಳಿದ ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಿದ್ದು, ಸಂಚಾರ ಮಾರ್ಗ ಮತ್ತು ವೇಳಾಪಟ್ಟಿಯನ್ನು ಬದಲಾವಣೆ ಮಾಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.