ಶನಿವಾರ, ಏಪ್ರಿಲ್ 17, 2021
30 °C

ರೈಲು ಸಂಪರ್ಕ: ವರದಿ ಪರಿಶೀಲನೆಗೆ ಸಿ.ಎಂ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇವನಹಳ್ಳಿಯ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೊ ಅಥವಾ ಹೈಸ್ಪೀಡ್ ರೈಲು ಸಂಪರ್ಕ ಕಲ್ಪಿಸುವ ಕುರಿತ ಸಾಧಕ-ಬಾಧಕಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಬೆಂಗಳೂರು ಮೆಟ್ರೊ ರೈಲು ನಿಗಮಕ್ಕೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ವಿಧಾನಸಭೆಯಲ್ಲಿ ತಿಳಿಸಿದರು.ಕಾಂಗ್ರೆಸ್‌ನ ಕೃಷ್ಣಬೈರೇಗೌಡ ಅವರು ಶೂನ್ಯ ವೇಳೆಯಲ್ಲಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ವಿಮಾನ ನಿಲ್ದಾಣಕ್ಕೆ ಮೆಟ್ರೊ ವಿಸ್ತರಣೆ ಹೆಚ್ಚು ಸೂಕ್ತವೋ, ಹೈಸ್ಪೀಡ್ ಸೂಕ್ತವೋ ಎಂಬ ವಿಷಯವನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದರು.ಇದಕ್ಕೆ ಪೂರಕವಾಗಿ ಎರಡೂ ಪ್ರಸ್ತಾವಗಳ ಅನುಕೂಲ, ಅನನುಕೂಲಗಳ ಬಗ್ಗೆ ತುಲನಾತ್ಮಕವಾಗಿ ಅಧ್ಯಯನ ನಡೆಸಿ ಸವಿಸ್ತಾರವಾದ ವರದಿ ನೀಡುವಂತೆ ಸೂಚಿಸಲಾಗಿದೆ. ಒಂದು ತಿಂಗಳಲ್ಲಿ ವರದಿಯು ಸರ್ಕಾರದ ಕೈಸೇರಲಿದೆ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.