ಭಾನುವಾರ, ಸೆಪ್ಟೆಂಬರ್ 22, 2019
22 °C

ರೈಲ್ವೆ ಯೋಜನೆ: 20ರಂದು ಬೆಂಗಳೂರಿನಲ್ಲಿ ಸಭೆ

Published:
Updated:

ಹುಬ್ಬಳ್ಳಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ಯೋಜನೆ ಅನುಷ್ಠಾನ ಸೇರಿದಂತೆ ಕರ್ನಾಟಕದ ಎಲ್ಲಾ ಮಹತ್ವದ ರೈಲ್ವೆ ಯೋಜನೆಗಳ ಕುರಿತು ಸಮಗ್ರವಾಗಿ ಚರ್ಚಿಸಲು ಕೇಂದ್ರ ರೇಲ್ವೆ ಸಚಿವ ದಿನೇಶ ತ್ರಿವೇದಿ ಸೆ. 20ರಂದು ಬೆಂಗಳೂರಿನಲ್ಲಿ ಕರ್ನಾಟಕದ ಎಲ್ಲ ಸಂಸದರ ಸಭೆ ನಡೆಸಲಿದ್ದಾರೆ.ದೆಹಲಿಯಲ್ಲಿ ಸಂಸದ ಅನಂತಕುಮಾರ ಹೆಗಡೆ ಅವರೊಂದಿಗೆ ಕೇಂದ್ರ ರೈಲ್ವೆ ಸಚಿವ ತ್ರಿವೇದಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ಮುನಿಯಪ್ಪ ಅವರನ್ನು ಭೇಟಿ ಮಾಡಿದಾಗ ಈ ಭರವಸೆ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

Post Comments (+)