ಮಂಗಳವಾರ, ಮೇ 18, 2021
30 °C

ರೋಗಿಗಳ ಜತೆ ಸೌಜನ್ಯದಿಂದ ವರ್ತಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ:  ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಲೋಕಾಯುಕ್ತ ಡಿವೈಎಸ್‌ಪಿ ಸಿ.ಬಿ. ಪಾಟೀಲ್ ವೈದ್ಯರು ಮತ್ತು ಇತರ ಸಿಬ್ಬಂದಿಗೆ ಸೂಚಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.ಆಸ್ಪತ್ರೆಯ ಹೆರಿಗೆ ವಿಭಾಗಕ್ಕೆ ಭೇಟಿ ನೀಡಿದ ಅವರು, ಸ್ವಚ್ಛತೆ ಕಾಪಾಡುವಂತೆ ಸಲಹೆ ನೀಡಿದರು. ನವಜಾತ ಶಿಶು-ಬಾಣಂತಿಯರ ಆರೋಗ್ಯದತ್ತ ಹೆಚ್ಚಿನ ನಿಗಾ ವಹಿಸಬೇಕು, ಯಾವುದೇ ಸೋಂಕು ತಗುಲದಂತೆ ಎಲ್ಲಾ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.ಎಲ್ಲಾ ವಾರ್ಡ್‌ಗಳಿಗೆ ಭೇಟಿ ನೀಡಿದ ಪಾಟೀಲ್, ಮಹಿಳೆಯರ ವಾರ್ಡ್‌ಗಳಿಗೆ ಅಡ್ಡ ಪರದೆ ಅಳವಡಿಸಬೇಕು. ಕಾಲ-ಕಾಲಕ್ಕೆ ಕರ್ತವ್ಯ ನಿರತ ವೈದ್ಯರು-ದಾದಿಯರು ರೋಗಿಯನ್ನು ಪರಿಶೀಲಿಸಿ ಸೂಕ್ತ ಸಲಹೆ ನೀಡಬೇಕು ಎಂದು ತಿಳಿಸಿದರು.ಆಸ್ಪತ್ರೆಯ ವಿವಿಧ ವೈದ್ಯರು ಕರ್ತವ್ಯ ನಿರ್ವಹಿಸುವ ಕೊಠಡಿಗಳಿಗೆ ಪ್ರತ್ಯೇಕವಾಗಿ ಭೇಟಿ ನೀಡಿ ಅವರು ಕರ್ತವ್ಯ ನಿರ್ವಹಿಸುವ ರೀತಿ ಅವಲೋಕಿಸಿದರು.ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಎಂ.ಸಿ. ಹುಲ್ಲಮನಿ ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ಸಿ.ಬಿ. ಪಾಟೀಲ್ ಅವರಿಗೆ  ಆಸ್ಪತ್ರೆಯ ಕುಂದು ಕೊರತೆ, ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯ ಕಲ್ಪಿಸುವುದಾಗಿ ತಿಳಿಸಿದರು.

ಆಸ್ಪತ್ರೆಯ ವೈದ್ಯರು, ನರ್ಸ್ ನಾಗರತ್ನಮ್ಮ, ಹನುಮಂತಪ್ಪ ಇತರ ಸಿಬ್ಬಂದಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.