ರೋಣ-–ಧರ್ಮಸ್ಥಳ ಬಸ್‌ ಸಂಚಾರ

7

ರೋಣ-–ಧರ್ಮಸ್ಥಳ ಬಸ್‌ ಸಂಚಾರ

Published:
Updated:

ರೋಣ: ಪಟ್ಟಣ ಸೇರಿದಂತೆ ತಾಲ್ಲೂ­ಕಿನ ವಿವಿಧ ಗ್ರಾಮಗಳ ಪ್ರಯಾಣಿಕರ ಅನುಕೂಲಕ್ಕಾಗಿ ನೂತನವಾಗಿ ರೋಣ- ಧರ್ಮಸ್ಥಳ ಸಾರಿಗೆಯನ್ನು ಪ್ರತಿದಿನ ಬೆಳಿಗ್ಗೆ 9 ಗಂಟೆಗೆ ರೋಣದಿಂದ ಹೊರಟು ರಾತ್ರಿ 10 ಗಂಟೆಯ ಸುಮಾರಿಗೆ ಧರ್ಮಸ್ಥಳ ತಲುಪಲಿದೆ. ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಜಿ.ಎಸ್.ಪಾಟೀಲ ಹೇಳಿದರು.ಅವರು ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಭಾನುವಾರ ನೂತನ ಬಸ್‌ ಸಂಚಾರಕ್ಕೆ ಚಾಲನೆ ನೀಡಿ ಮಾತ­ನಾಡಿದರು. ಸರಕಾರ ಸಹಾಯದೊಂದಿಗೆ ಹಿರಿಯ ನಾಗರಿಕರಿಗೆ ಶೇ 25 ರಷ್ಟು ಕಡಿಮೆ ರಿಯಾಯತಿ, ಅಂಗವಿಕಲರಿಗೆ 100 ಕಿ.ಮೀ. ದೂರದವರೆಗೆ ಪ್ರಯಾಣ ಮಾಡಲು ರಿಯಾ­ಯತಿ­ಯಲ್ಲಿ ಪಾಸುಗಳು ಸೇರಿ­ದಂತೆ ವಿವಿಧ ರೀತಿಯ ಸೌಲಭ್ಯಗಳನ್ನು ಒದಗಿಸ­ಲಾಗಿದೆ ಎಂದರು. ಈ ಸಮಯದಲ್ಲಿ ಹಾವೇರಿ ಲೋಕಸಭಾ ಮತಕ್ಷೇತ್ರದ ಯುವ ಕಾಂಗ್ರೆಸ್‌ ಘಟಕದ ಉಪಾಧ್ಯಕ್ಷ ಮಿಥುನ್ ಜಿ.ಪಾಟೀಲ, ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ, ಸಂಗು ನವಲಗುಂದ ಇತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry