ಸೋಮವಾರ, ಜೂನ್ 14, 2021
27 °C

ರೋಸ್ಟರ್ ಪದ್ಧತಿ ಜಾರಿಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

1995ರ ನಂತರ ಆರಂಭವಾದ 2,000 ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅನುದಾನ ನೀಡುವ ಮೊದಲು ಈ ಶಿಕ್ಷಣ ಸಂಸ್ಥೆಗಳ ನೇಮಕಾತಿಯಲ್ಲಿ ಮೀಸಲಾತಿ ಪಾಲನೆ ಆಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು.ಮೀಸಲಾತಿ ನಿಯಮ ಪಾಲನೆ ಆದರೆ ಸುಮಾರು 10,000 ದಲಿತ ಹಾಗೂ ಹಿಂದುಳಿದ ನಿರುದ್ಯೋಗಿಗಳಿಗೆ ಉದ್ಯಾಗಾವಕಾಶ ಸಿಗಲಿವೆ.

ಈಗಾಗಲೇ ಅನುದಾನ ಪಡೆದಿರುವ ಶಿಕ್ಷಣ ಸಂಸ್ಥೆಗಳು ನಿರ್ದಿಷ್ಟ ಕಾಲ ಮಿತಿಯಲ್ಲಿ ಮೀಸಲಾತಿ ನಿಯಮ ಪಾಲಿಸುವ ಲಿಖಿತ ಭರವಸೆ ನೀಡಿದ್ದವು. ಆದರೆ ಅವಧಿ ಮುಗಿದರೂ ಮೀಸಲಾತಿ ಅನ್ವಯ ನೇಮಕಾತಿ ನಡೆದಿಲ್ಲ. ಮೀಸಲಾತಿ ನಿಯಮ ಉಲ್ಲಂಘಿಸಿಯೂ ಅನುದಾನ ಪಡೆದುಕೊಳ್ಳುತ್ತಿವೆ. ಸರ್ಕಾರ ಮತ್ತೆ ಅದಕ್ಕೆ ಅವಕಾಶ ಕೊಡಬಾರದು.

 ಈಗಾಗಲೇ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ನೇಮಕಾತಿಯಲ್ಲಿ ಮೀಸಲಾತಿ ನೀತಿ ಜಾರಿಗೆ ತಂದಿವೆಯೇ ಎಂಬುದನ್ನು ಪರಿಶೀಲಿಸಲು ಸಮೀಕ್ಷೆ ನಡೆಸಬೇಕು. ಮೀಸಲಾತಿ ನಿಯಮ ಪಾಲಿಸದ ಸಂಸ್ಥೆಗಳಿಗೆ ಅನುದಾನ ನಿಲ್ಲಿಸುವ ನಿರ್ಧಾರ ತೆಗೆದುಕೊಳ್ಳಬೇಕು. ಇಂತಹ ನಿರ್ಧಾರದಿಂದ ದಲಿತ, ಹಿಂದುಳಿತ ವರ್ಗಗಳ ನಿರುದ್ಯೋಗಿಗಳಿಗೆ ಅನುಕೂಲ ಆಗುತ್ತದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.