ಹೈದರಾಬಾದ್(ಪಿಟಿಐ): ರೋಹಿತ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ಮುಂದುವರೆದಿದ್ದು, ವಿದ್ಯಾರ್ಥಿಗಳು ಸೋಮವಾರ ‘ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯ ಚಲೋ’ ನಡೆಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ಜಮಾಯಿಸಿದ್ದಾರೆ.

ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಏಳು ವಿದ್ಯಾರ್ಥಿಗಳು ಭಾನುವಾರ ಅಸ್ವಸ್ಥರಾದ ಕಾರಣ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗಿದೆ ಎಂದು ವೈದ್ಯ ರವೀಂದ್ರ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರದಾದ್ಯಂತ ವಿವಿಧ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿ ಆವಣರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಪ್ರತಿಭಟನಾನಿರತರು ತಿಳಿಸಿದ್ದಾರೆ.

ಪಿ. ಅಪ್ಪಾರಾವ್ ಅವರನ್ನು ವಿವಿಯ ಕುಲಪತಿ ಸ್ಥಾನದಿಂದ ತೆಗೆದು ಹಾಕಬೇಕು. ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ರಕ್ಷಣೆಗೆ ‘ರೋಹಿತ್ ಕಾಯ್ದೆ’ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.