ಶುಕ್ರವಾರ, ಮೇ 7, 2021
24 °C

ರೌಡಿಗಳ ಮನೆ ಮೇಲೆ ದಾಳಿ: ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೌಡಿಗಳ ಮನೆಗಳ ಮೇಲೆ ಭಾನುವಾರ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ ನಗರ ಪೊಲೀಸರು, ಅಪರಾಧ ಚಟುವಟಿಕೆಗಳನ್ನು ಮುಂದುವರಿಸದಂತೆ ರೌಡಿಗಳಿಗೆ ಎಚ್ಚರಿಕೆ ನೀಡಿದರು.ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಸೇರಿದಂತೆ ಉತ್ತರ ವಿಭಾಗ, ಈಶಾನ್ಯ ವಿಭಾಗ ಹಾಗೂ ಪೂರ್ವ ವಿಭಾಗದ ಪೊಲೀಸರು ಜಂಟಿಯಾಗಿ ಸುಮಾರು 250 ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು.ಗುರುಮೂರ್ತಿ ಅಲಿಯಾಸ್ ಬಳ್ಳಾ, ಅರಸಯ್ಯ, ಚಾಂದ್ ಸಜ್ಜಾದ್, ರಾಮ, ಲಕ್ಷ್ಮಣ, ರವಿಕುಮಾರ ಅಲಿಯಾಸ್ ದೂದ್ ರವಿ, ಲೋಕೇಶ ಅಲಿಯಾಸ್ ಮುಲಾಮ, ಹತೀಕ್ ಪಾಷ, ವೆಂಕಟೇಶ್ ಅಲಿಯಾಸ್ ವೆಂಕಿ, ಅಮ್ಜದ್ ಚೌದರಿ, ಮುಜಾಹಿದ್ ಸೇರಿದಂತೆ ಒಟ್ಟು 45 ರೌಡಿಗಳನ್ನು ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು, ಅವರನ್ನು ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದರು. ಈ ವೇಳೆ ಅಹಿತಕರ ಘಟನೆಗಳನ್ನು ನಡೆಸದಂತೆ ಎಚ್ಚರಿಕೆ ನೀಡಿ ಕಳುಹಿಸಿದರು.`ರೌಡಿಗಳು ಸಾಮಾನ್ಯವಾಗಿ ರಜೆ ದಿನಗಳಲ್ಲಿ ಮಾತ್ರ ಮನೆಯಲ್ಲಿರುತ್ತಾರೆ. ಹೀಗಾಗಿ, ಭಾನುವಾರವೇ ದಾಳಿ ನಡೆಸಲಾಯಿತು. ಈ ವೇಳೆ ಅವರ ಮನೆಯಲ್ಲಿ ಕೆಲ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.ಅಲ್ಲದೇ, ಅವರ ಪ್ರಸ್ತುತ ಸ್ಥಿತಿಗತಿ, ಜೀವನ ಶೈಲಿ, ಸಹಚರರ ಬಗ್ಗೆಯೂ ಮಾಹಿತಿ ಕಲೆಹಾಕಲಾಯಿತು ಎಂದು ಅಧಿಕಾರಿಗಳು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.