ಭಾನುವಾರ, ಜೂನ್ 13, 2021
24 °C

ರೌಡಿಯ ಬರ್ಬರ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಕನಕಪುರ ಮುಖ್ಯರಸ್ತೆಯಲ್ಲಿ ಶುಕ್ರವಾರ ರಾತ್ರಿ ದುಷ್ಕರ್ಮಿಗಳು ರೌಡಿ ನಾಗರಾಜ ಅಲಿಯಾಸ್‌ ಕುಳ್ಳನಾಗ (53) ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.ತಲಘಟ್ಟಪುರ ಸಮೀಪದ ರಘುವನಹಳ್ಳಿ ನಿವಾಸಿಯಾದ ನಾಗರಾಜ, ಸ್ನೇಹಿತ ಕುಮಾರ್‌ ಜತೆ ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದಾಗ ನಾಲ್ಕೈದು ಮಂದಿ ದುಷ್ಕರ್ಮಿಗಳು ಕಾರಿನಲ್ಲಿ ಹಿಂಬಾಲಿಸಿ ಬಂದು ಈ ಕೃತ್ಯ ಎಸಗಿದ್ದಾರೆ.ದುಷ್ಕರ್ಮಿಗಳು ನಾಗರಾಜನ ಬೈಕ್‌ಗೆ ಹಿಂದಿನಿಂದ ಕಾರು ಗುದ್ದಿಸಿದ್ದಾರೆ. ಈ ವೇಳೆ ಬೈಕ್‌ನಿಂದ ಕೆಳಗೆ ಬಿದ್ದ ಆತನ ಮೇಲೆ ಮಚ್ಚುಲಾಂಗ್‌ಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡುತ್ತಿದ್ದ ನಾಗರಾಜನ ವಿರುದ್ಧ ಸುಬ್ರಹ್ಮಣ್ಯಪುರ, ಕುಮಾರಸ್ವಾಮಿ ಲೇಔಟ್‌ ಸೇರಿದಂತೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.