ಗುರುವಾರ , ಏಪ್ರಿಲ್ 22, 2021
27 °C

ರೌಡಿ ಜಾರ್ಜ್ ಮೇಲೆ ಪೊಲೀಸರ ಗುಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿ ಜಾರ್ಜ್ (24) ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಕೋರಮಂಗಲ ಬಿಡಿಎ ವಾಣಿಜ್ಯ ಸಂಕೀರ್ಣದ ಬಳಿ ಗುರುವಾರ ಸಂಜೆ ನಡೆದಿದೆ.ಗುಂಡೇಟಿನಿಂದ ಗಾಯಗೊಂಡಿರುವ ಜಾರ್ಜ್‌ನನ್ನು ಬಂಧಿಸಿದ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಜಾರ್ಜ್ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಆತನನ್ನು ಹಿಡಿಯಲು ಮುಂದಾದ ಕಾನ್‌ಸ್ಟೇಬಲ್ ಸುರೇಶ್ ಎಂಬುವರ ಮೇಲೆ ಜಾರ್ಜ್ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಾಯಗೊಂಡಿರುವ ಸುರೇಶ್ ಅವರು ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.`ಜಾರ್ಜ್ ಗುರುವಾರ ಕೋರಮಂಗಲ ಬಿಡಿಎ ವಾಣಿಜ್ಯ ಸಂಕೀರ್ಣದ ಬಳಿ ಇರುವ ಬಗ್ಗೆ ಮಾಹಿತಿ ದೊರೆಯಿತು. ಪೊಲೀಸರು ಅಲ್ಲಿಗೆ ಧಾವಿಸಿ ಆತನನ್ನು ಹಿಡಿಯುವ ಪ್ರಯತ್ನ ನಡೆಸಿದ ಸಂದರ್ಭದಲ್ಲಿ ಆತ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಕೋರಮಂಗಲ ಠಾಣೆಯ ಇನ್‌ಸ್ಪೆಕ್ಟರ್ ಪ್ರಶಾಂತ್ ಅವರು ಜಾರ್ಜ್‌ನ ಎಡಗಾಲಿಗೆ ಗುಂಡು ಹಾರಿಸಿದ್ದಾರೆ~ ಎಂದು ಮಡಿವಾಳ ಉಪ ವಿಭಾಗದ ಎಸಿಪಿ ಸುಬ್ಬಣ್ಣ `ಪ್ರಜಾವಾಣಿ~ಗೆ ತಿಳಿಸಿದರು.`ಜಾರ್ಜ್ ವಿರುದ್ಧ ಆಡುಗೋಡಿ ಹಾಗೂ ವಿವೇಕನಗರ ಠಾಣೆಗಳಲ್ಲಿ ಕೊಲೆ, ದರೋಡೆ ಮತ್ತಿತರ ಅಪರಾಧ ಪ್ರಕರಣಗಳು ದಾಖಲಾಗಿವೆ. ಕೋರಮಂಗಲ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಸಂಬಂಧ ಜಾರ್ಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು~ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.