ಸೋಮವಾರ, ಮೇ 23, 2022
28 °C

ರ್‍ಯಾಗಿಂಗ್ ನಿಯಂತ್ರಣಕ್ಕೆ 24 ಗಂಟೆ ಸಹಾಯವಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ(ಐಎಎನ್‌ಎಸ್): ಉತ್ತರ ಪ್ರದೇಶದ ಎಲ್ಲ ಎಂಜನಿಯರಿಂಗ್, ವೈದ್ಯಕೀಯ ಹಾಗೂ ಮ್ಯಾನೇಜ್‌ಮೆಂಟ್ ಕಾಲೇಜುಗಳಲ್ಲಿ  ರ್‍ಯಾಗಿಂಗ್ ಹಾವಳಿಯನ್ನು  ತಡೆಯಲು 24 ಗಂಟೆ ಕಾರ್ಯನಿರ್ವಹಿಸುವ  ಸಹಾಯವಾಣಿ ಪ್ರಾರಂಭವಾಗಲಿದೆ.ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಸೂಚನೆಯ ಮೇರೆಗೆ ಸಹಾಯವಾಣಿ ಸ್ಥಾಪಿಸಲು ಕ್ರಿಯಾ ಯೋಜನೆಯನ್ನು ಸಿದ್ದವಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ರ್‍ಯಾಗಿಂಗ್ ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿ ಅವರನ್ನು ಕಪ್ಪುಪಟ್ಟಿಗೆ ಸೇರಿಸುವ ಮೂಲಕ ಐದು ವರ್ಷಗಳ ಕಾಲ ಮತ್ತೆ ಅವರಿಗೆ ಪ್ರವೇಶ ನೀಡದಂತೆ ನೋಡಿಕೊಳ್ಳಲಾಗುತ್ತದೆ. ರ್‍ಯಾಗಿಂಗ್ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ  ಈ ಕ್ರಮ ಕೈಗೊಳ್ಳಲಾಗಿದೆ.ಈ 24X7ರ ಸಹಾಯವಾಣಿಯಲ್ಲಿ ದೂರುಗಳು ದಾಖಲಾಗುವ ವ್ಯವಸ್ಥೆಯೂ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.