ಸೋಮವಾರ, ಮೇ 17, 2021
25 °C

ಲಂಚ: ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ವ್ಯಕ್ತಿಯೊಬ್ಬರಿಂದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಭೂಸ್ವಾಧೀನ ಮತ್ತು ಪುನರ್‌ವಸತಿ (ಕಂದಾಯ) ಇಲಾಖೆ ಉಪ ಕಾರ್ಯದರ್ಶಿ ವೆಂಕಟೇಶಮೂರ್ತಿ ಮತ್ತು ಅಧೀನ ಕಾರ್ಯದರ್ಶಿ ಶ್ರೀನಿವಾಸಮೂರ್ತಿ ಬುಧವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನಾಗವಾರದ ಗುತ್ತಿಗೆದಾರ ಮಂಜುನಾಥ ಎಂಬುವರು ನ್ಯಾಯಾಲಯದ ಆದೇಶದ ಪ್ರಕಾರ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಈ ಇಬ್ಬರೂ ಅಧಿಕಾರಿಗಳು 50 ಸಾವಿರ ರೂಪಾಯಿ ಲಂಚ ಕೇಳಿದ್ದರು. ನಂತರ 40 ಸಾವಿರ ರೂಪಾಯಿ ಕೊಡಲು ಒಪ್ಪಿ, ಮೊದಲ ಕಂತಿನಲ್ಲಿ 20 ಸಾವಿರ ರೂಪಾಯಿ ನೀಡುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಈ ಅಧಿಕಾರಿಗಳನ್ನು ಬಂಧಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.