ಗುರುವಾರ , ಜನವರಿ 23, 2020
27 °C

ಲಂಚ ಪ್ರಕರಣ: ಅಪರಾಧಿ ಶರಣು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಂಚ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದು, ಹೈಕೋರ್ಟ್ ಕೂಡ ಶಿಕ್ಷೆಯನ್ನು ಎತ್ತಿ ಹಿಡಿದಿದ್ದ ಎರಡು ಪ್ರಕರಣಗಳ ಅಪರಾಧಿಗಳು ಗುರುವಾರ ಮತ್ತು ಶುಕ್ರವಾರ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಇಬ್ಬರೂ ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.ಹಿಂದಿನ ಬೆಂಗಳೂರು ಮಹಾನಗರ ಪಾಲಿಕೆಯ (ಬಿಎಂಪಿ) ಕಂದಾಯ ಅಧಿಕಾರಿ ಗಂಗಯ್ಯ ಗುರುವಾರ ಶರಣಾಗಿದ್ದರು. ಬೃಹತ್ ಬೆಂಗಳೂರು ಮಹಾನಗರ ಪಾಲಕೆಯ ಹಿರಿಯ ಆರೋಗ್ಯ ಅಧಿಕಾರಿಯಾಗಿದ್ದ ಮುನಿನರಸಯ್ಯ ಶುಕ್ರವಾರ ಶರಣಾದರು. ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಇಬ್ಬರು ಅಪರಾಧಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಇತ್ತೀಚೆಗೆ ವಜಾಗೊಳಿಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಎತ್ತಿ ಹಿಡಿದಿತ್ತು.

ಪ್ರತಿಕ್ರಿಯಿಸಿ (+)