ಗುರುವಾರ , ಮೇ 13, 2021
22 °C

ಲಂಚ ಪ್ರಕರಣ: ರತ್ನಾಕರ ಶೆಟ್ಟಿ ಜಾಮೀನಿಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ದಾಳಿಯಿಂದ ತಪ್ಪಿಸಿಕೊಂಡು ಪರಾರಿಯಾಗಿ, ತಲೆಮರೆಸಿಕೊಂಡಿರುವ ಪೊಲೀಸ್ ಇನ್‌ಸ್ಪೆಕ್ಟರ್ ರತ್ನಾಕರ ಶೆಟ್ಟಿ ಜಾಮೀನು ಕೋರಿ `ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ~ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಸೆಪ್ಟೆಂಬರ್ 7ರಂದು ಲೋಕಾಯುಕ್ತ ದಾಳಿಯ ಸುಳಿವು ಪಡೆದಿದ್ದ ರತ್ನಾಕರ ಶೆಟ್ಟಿ ಮತ್ತು ಕಾನ್‌ಸ್ಟೆಬಲ್ ಸುಹೇಲ್ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಬಳಿಕ ಇಬ್ಬರೂ ತಲೆಮರೆಸಿಕೊಂಡಿದ್ದಾರೆ. ಇಬ್ಬರನ್ನೂ ಸೇವೆಯಿಂದ ಅಮಾನತು ಮಾಡಿ ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ ಆದೇಶ ಹೊರಡಿಸಿದ್ದರು.ರತ್ನಾಕರ ಶೆಟ್ಟಿ ಪರ ವಕೀಲರು ಬುಧವಾರ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದರು. ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸುವುದಾಗಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರರಾವ್ ತಿಳಿಸಿದರು.ಜಯಲಲಿತಾ ಭದ್ರತೆ: ಮಾಹಿತಿಗೆ ಆದೇಶ

ಅಕ್ರಮ ಆಸ್ತಿ ಗಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಕೋರ್ಟ್‌ಗೆ ಹಾಜರು ಆಗಲಿರುವ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಭದ್ರತೆ ನೀಡುವ ಸಂಬಂಧ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಪತ್ರ ಬರೆಯುವಂತೆ ನಗರದ ವಿಶೇಷ ಕೋರ್ಟ್ ರಿಜಿಸ್ಟ್ರಾರ್ ಅವರಿಗೆ ಸೂಚಿಸಿದೆ.ವಿಶೇಷ ಕೋರ್ಟ್‌ಗೆ ಅವರು ಖುದ್ದು ಹಾಜರು ಆಗಬೇಕೆಂದು ಸುಪ್ರೀಂಕೋರ್ಟ್ ಕಳೆದ ತಿಂಗಳು ನಿರ್ದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಯಾವ ರೀತಿಯ ಭದ್ರತೆ ನೀಡಲಾಗುವುದು ಎಂಬ ಬಗೆಗಿನ ವರದಿಯನ್ನು ಸರ್ಕಾರ ಹಾಗೂ ಪೊಲೀಸರಿಂದ ಸಂಗ್ರಹಿಸಿ ಬರುವ ಅಕ್ಟೋಬರ್ 10ರ ಒಳಗೆ ಕೋರ್ಟ್‌ಗೆ ನೀಡುವಂತೆ ಆದೇಶಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.