ಮಂಗಳವಾರ, ಜೂನ್ 22, 2021
22 °C

ಲಂಬಾಣಿ ಸಮುದಾಯ ಪ್ರಗತಿಗೆ ಶಿಕ್ಷಣ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಬಾಣಿ ಸಮುದಾಯ ಪ್ರಗತಿಗೆ ಶಿಕ್ಷಣ ಅಗತ್ಯ

ಚಳ್ಳಕೆರೆ: ರಾಜ್ಯದಲ್ಲಿ ಲಂಬಾಣಿ ಸಮುದಾಯದವರು ಶೈಕ್ಷಣಿಕವಾಗಿ ಮುಂದೆ ಬರುವ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ಲಂಬಾಣಿ ಗುರು ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಕರೆ ನೀಡಿದರು.ಪಟ್ಟಣದ ಬಿ.ಎಂ. ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಭಾನುವಾರ ತಾಲ್ಲೂಕು ಬಂಜಾರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಂಜಾರ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಂತ ಸೇವಾಲಾಲ್ ಅವರ 273ನೇ ವರ್ಷದ ಜಯಂತ್ಯುತ್ಸವ ಹಾಗೂ ಲಂಬಾಣಿ ಸಂಸ್ಕೃತಿ ಉತ್ಸವ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.ಯಾವುದೇ ಸಮುದಾಯ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಪ್ರಗತಿ ಸಾಧಿಸಲು ಶಿಕ್ಷಣ ಮತ್ತು ಸಂಘಟನೆ ಅತ್ಯಗತ್ಯ ಎಂದು ಪ್ರತಿಪಾದಿಸಿದರು.ಕುರುಡಿಹಳ್ಳಿ ಶಿವಸಾಧು ಸ್ವಾಮೀಜಿ ಮಾತನಾಡಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ತಮ್ಮ ಸಂಸ್ಕೃತಿ ಉಳಿಸಿಕೊಂಡು ಬದುಕುತ್ತಿರುವ ಲಂಬಾಣಿ ಸಮುದಾಯದ ನಾಯಕರು ಸಮಾಜ ಮೆಚ್ಚುವಂತಹ ರೀತಿಯಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ ಗುರುತಿಸಿಕೊಳ್ಳಬೇಕು ಎಂದು ಹೇಳಿದರು.ಬಂಜಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಸಮಾಜದ ಮುಖಂಡರಾದ ಡಾ.ಬಿ. ಚಂದ್ರಾನಾಯ್ಕ, ಗೋಪಾಲ ನಾಯ್ಕ, ಶಾಸಕ ಡಿ. ಸುಧಾಕರ್, ಕಾಂಗ್ರೆಸ್ ಮುಖಂಡ ಟಿ. ರಘುಮೂರ್ತಿ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕೆ.ಟಿ. ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಪಿ. ತಿಪ್ಪೇಸ್ವಾಮಿ, ಸಮಾಜ ಸೇವಕ ಎಲ್. ನಾಗರಾಜ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಟಿ. ರವಿಕುಮಾರ್, ಸದಸ್ಯ ಜಯಪಾಲಯ್ಯ, ಪುರಸಭೆ ಅಧ್ಯಕ್ಷೆ ಪಿ. ಶಂಷಾದ್ ಇನ್ನಿತರರು ಇದ್ದರು.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.