ಗುರುವಾರ , ಆಗಸ್ಟ್ 13, 2020
25 °C

ಲಕ್ಷ್ಮಿನರಸಮ್ಮ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಕ್ಷ್ಮಿನರಸಮ್ಮ ನಿಧನ

ನೆಲಮಂಗಲ:  ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ  ಮಾಜಿ  ಉಪಾಧ್ಯಕ್ಷೆ  ಲಕ್ಷ್ಮಿನರಸಮ್ಮ  (80)  ಭಾನುವಾರ ಸಂಜೆ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾದರು.ಅವರು ಹೃದಯ ತೊಂದರೆಯಿಂದ ಬಳಲುತ್ತಿದ್ದರು. ನೆಲಮಂಗಲ ತಾಲ್ಲೂಕು ಬೋರ್ಡ್‌ನ ಪ್ರಥಮ ಉಪಾಧ್ಯಕ್ಷೆ ಯಾಗಿ, ಎಪಿಎಂಸಿ ನಿರ್ದೇಶಕಿಯಾಗಿ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷೆ ಯಾಗಿ, ಮಹಿಳಾ ಕ್ಷೇಮಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ರಂಗನಾಥ್ ಸೇರಿದಂತೆ ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ಸೋಮವಾರ ಮಧ್ಯಾಹ್ನ ಒಂದು ಗಂಟೆಗೆ ಪಟ್ಟಣದ ಸುಭಾಷ್‌ನಗರದಲ್ಲಿ ಅಂತ್ಯಸಂಸ್ಕಾರ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.