ಲಕ್ಷ್ಮೀವೆಂಕಟೇಶ್ವರ ದೇವಾಲಯ ಜೀರ್ಣೋದ್ಧಾರ

7

ಲಕ್ಷ್ಮೀವೆಂಕಟೇಶ್ವರ ದೇವಾಲಯ ಜೀರ್ಣೋದ್ಧಾರ

Published:
Updated:

ಗೌರಿಬಿದನೂರು: ಪಟ್ಟಣದ ಬಜಾರ್ ರಸ್ತೆಯಲ್ಲಿರುವ ಲಕ್ಷ್ಮೀವೆಂಕಟೇಶ್ವರ ದೇವಾಲಯದ ಜೀರ್ಣೋದ್ಧಾರ ಮತ್ತು ವಿಮಾನ ಗೋಪುರವನ್ನು ಗುರುವಾರ  ಜಿಲ್ಲಾ ಉಸ್ತುವಾರಿ ಸಚಿವ ಜಿ. ನಾರಾಯಣಸ್ವಾಮಿ ಉದ್ಘಾಟಿಸಿದರು. ಸುಮಾರು ಎಂಟು ನೂರು ವರ್ಷಗಳ ಇತಿಹಾಸವಿರುವ  ಈ  ದೇವಾಲಯವನ್ನು ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ.ಈ ಸಂದರ್ಭದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಿತು.  ಭಕ್ತರು ದೇವಸ್ಥಾನದ ಮುಂದೆ ಸಾಲುಗಟ್ಟಿ ನಿಂತು ದರ್ಶನ ಪಡೆದರು. ಬಜಾರ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಗಾಂಧಿ ವೃತ್ತದಲ್ಲಿ ನಿರ್ಮಿಸಿದ ಗಾಳಿ ಗೋಪುರ ಎಲ್ಲರ ಮನಸೂರೆಗೊಂಡಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry