ಮಂಗಳವಾರ, ಏಪ್ರಿಲ್ 20, 2021
26 °C

ಲಲಿತ್ ಮೋದಿ ಸ್ವದೇಶಕ್ಕೆ ಕರೆಸಿಕೊಳ್ಳಲು ಸರ್ಕಾರದ ಪ್ರಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರನ್ನು ವಿಚಾರಣೆಗಾಗಿ ಸ್ವದೇಶಕ್ಕೆ ಕರೆಸಿಕೊಳ್ಳಲು ಕೇಂದ್ರ ಸರ್ಕಾರ ಪ್ರಯತ್ನ ಆರಂಭಿಸಿದೆ.ಐಪಿಎಲ್ ಟೂರ್ನಿಯ ವೇಳೆ ಹಣಕಾಸಿನ ಅವ್ಯವಹಾರ ನಡೆಸಿದ ಆರೋಪ ಮೋದಿ ಮೇಲಿದೆ. ಅವರು ಕಳೆದ ಎರಡು ವರ್ಷಗಳಿಂದ ಬ್ರಿಟನ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ಮೂಲಕ ತನಿಖೆಗೆ ಒಳಗಾಗುವುದರಿಂದ `ತಪ್ಪಿಸಿ~ಕೊಂಡಿದ್ದಾರೆ.ಮೋದಿ ಅವರನ್ನು ಭಾರತಕ್ಕೆ ಕರೆಸಿಕೊಳ್ಳಲು ಪ್ರಯತ್ನ ಆರಂಭಿಸುವಂತೆ ಹಣಕಾಸು ಇಲಾಖೆಯು ಕೇಂದ್ರ ವಿದೇಶಾಂಗ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ ತಿಳಿಸಿದೆ. ಹಣಕಾಸು ಇಲಾಖೆಯ ಮೂಲಗಳು ಇದನ್ನು ಬಹಿರಂಪಡಿಸಿದೆ. ಮೋದಿ ಅವರನ್ನು ಭಾರತಕ್ಕೆ ಕರೆಸಿಕೊಳ್ಳಲು ಬ್ರಿಟನ್ ಅಧಿಕಾರಿಗಳ ನೆರವು ಪಡೆಯುವಂತೆಯೂ ತಿಳಿಸಿದೆ.ಜಾರಿ ನಿರ್ದೇಶನಾಲಯದ ಕೋರಿಕೆಯಂತೆ ಹಣಕಾಸು ಇಲಾಖೆಯು ವಿದೇಶಾಂಗ ಸಚಿವಾಲಯದ ಮೊರೆ ಹೋಗಿದೆ ಎನ್ನಲಾಗಿದೆ. ಮೋದಿ ನಡೆಸಿದ್ದಾರೆ ಎನ್ನಲಾದ ಅವ್ಯವಹಾರಗಳ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.`ಹಣಕಾಸು ಇಲಾಖೆಯಿಂದ ಇಂತಹ ಕೋರಿಕೆ ಬಂದಿದ್ದರೆ, ಅದನ್ನು ಪರಿಗಣಿಸುವೆವು~ ಎಂದು ವಿದೇಶ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ. ಆದರೆ, ಹಣಕಾಸು ಇಲಾಖೆ ಇಟ್ಟಂತಹ ಹೆಜ್ಜೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಮೋದಿ ಅವರ ವಕೀಲ ಮೆಹ್ಮೂದ್ ಅಬ್ದಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.