ಗುರುವಾರ , ಮೇ 13, 2021
35 °C

ಲಷ್ಕರ್ ಉಗ್ರನ ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗ (ಪಿಟಿಐ): ಭದ್ರತಾ ಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ಲಷ್ಕರ್-ಏ-ತೊಯ್ಬಾ ಉಗ್ರನೊಬ್ಬ ಹತನಾಗಿರುವ ಘಟನೆ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‌ನಲ್ಲಿ ಮಂಗಳವಾರ ನಡೆದಿದೆ.ಇಲ್ಲಿನ ಬಘತ್-ಏ-ಬತ್‌ಪೋರಾದಲ್ಲಿ  ಲಷ್ಕರ್ ಉಗ್ರರು ತಂಗಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ರಾಷ್ಟ್ರೀಯ ರೈಫಲ್ಸ್ ಮತ್ತು ಸ್ಥಳೀಯ ಪೊಲೀಸರು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸುತ್ತಿದ್ದರು.

ಈ ವೇಳೆ ಅವಿತುಕೊಂಡಿದ್ದ ಉಗ್ರ ಭದ್ರತಾ ಪಡೆಗಳತ್ತ ಗುಂಡಿನ ದಾಳಿ ನಡೆಸಿದ್ದಾನೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.