ಗುರುವಾರ , ಮಾರ್ಚ್ 4, 2021
30 °C

ಲಾರಿಗೆ ಬಸ್ ಡಿಕ್ಕಿ, ನಾಲ್ವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾರಿಗೆ ಬಸ್ ಡಿಕ್ಕಿ, ನಾಲ್ವರ ಸಾವು

ಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ಸಿಮೆಂಟ್ ಚೀಲಗಳನ್ನು ತುಂಬಿಕೊಂಡು ರಸ್ತೆಬದಿ ನಿಂತಿದ್ದ ಲಾರಿಯ ಹಿಂಬದಿಗೆ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ, ನಾಲ್ವರು ಮೃತಪಟ್ಟು ಆರು ಜನ ಗಾಯಗೊಂಡಿರುವ ಘಟನೆ ಬುಧವಾರ ಮಧ್ಯರಾತ್ರಿ ಹಿರೇಹಳ್ಳಿಯಲ್ಲಿ ನಡೆದಿದೆ.ಬೆಂಗಳೂರು– ಬಳ್ಳಾರಿ ರಾಜ್ಯಹೆದ್ದಾರಿಯಲ್ಲಿ ಘಟನೆ ನಡೆದಿದೆ. ಬಸ್‌ನಲ್ಲಿದ್ದ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಗುಡಿಹಾಳ್‌ನ ಸಾಬಯ್ಯ (20), ಸಿಂಧನೂರಿನ ಅಶೋಕ (30), ಇದೇ ತಾಲ್ಲೂಕಿನ ಗೋನಾಳ್‌ ಗ್ರಾಮದ ವೀರಭದ್ರಪ್ಪ (45), ಮಾನ್ವಿಯ ಮಲ್ಲಪ್ಪ (35) ಮೃತರು.ಗಾಯಾಳುಗಳನ್ನು ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್‌ ಮಾನ್ವಿಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಘಟನೆ ನಂತರ ಬಸ್‌ ಚಾಲಕ ನಾಪತ್ತೆಯಾಗಿದ್ದಾನೆ. ತಳಕು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.