ಮಂಗಳವಾರ, ಮೇ 18, 2021
30 °C

ಲಾರಿಯಲ್ಲಿದ್ದ ಹಣ ಶ್ರೀನಿವಾಸರೆಡ್ಡಿಗೆ ಸೇರಿದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅನಂತಪುರ (ಪಿಟಿಐ): ಲಾರಿ ಮೂಲಕ ಸಾಗಿಸುತ್ತಿದ್ದ 4.95 ಕೋಟಿ ರೂಪಾಯಿ ಹಣ ಬಿ.ವಿ.ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿದ್ದು ಎಂದು ಮೇಲ್ನೋಟಕ್ಕೆ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಗುರುವಾರ ಗುಂತಕಲ್ ಬಳಿ ಪೊಲೀಸರು ಲಾರಿ ತಡೆದು ಹಣ ವಶಪಡಿಸಿಕೊಂಡಿದ್ದರು. ಜತೆಗೆ ಇಬ್ಬರನ್ನು ಬಂಧಿಸಿದ್ದರು. ಬಳ್ಳಾರಿಯಲ್ಲಿ ಅನಾಮಧೇಯ ವ್ಯಕ್ತಿಗಳು ಈ ಹಣವನ್ನು ನೀಡಿದ್ದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.ಈ ಹಣ ಓಸಿಎಂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿರುವ ಬಗ್ಗೆ ಮಾಹಿತಿ ಇದೆ ಎಂದೂ ಅಧಿಕಾರಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.