ಸೋಮವಾರ, ಜನವರಿ 20, 2020
25 °C

ಲಾರಿ ಡಿಕ್ಕಿ: ಪಾದಚಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇವನಹಳ್ಳಿಯ ಹಕ್ಕುಪೇಟೆ ಜಂಕ್ಷನ್‌ ಬಳಿ ಬುಧವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಮುನಿಕೃಷ್ಣ (55) ಎಂಬುವರು ಮೃತಪಟ್ಟಿದ್ದಾರೆ.ಮೂಲತಃ ಶಿಡ್ಲಘಟ್ಟದವರಾದ ಮುನಿಕೃಷ್ಣ, ಕೂಲಿ ಕಾರ್ಮಿಕರಾಗಿದ್ದರು. ದೇವನಹಳ್ಳಿ ಜಂಕ್ಷನ್‌ನಲ್ಲಿರುವ ಮಗಳ ಮನೆಗೆ ಬಂದಿದ್ದ ಅವರು ರಾತ್ರಿ ಏಳು ಗಂಟೆ ಸುಮಾರಿಗೆ ಊರಿಗೆ ವಾಪಸ್‌ ಹೊರಟಿದ್ದರು. ಬಸ್‌ ನಿಲ್ದಾಣಕ್ಕೆ ಹೋಗಲು ರಸ್ತೆ ದಾಟುತ್ತಿದ್ದ ಅವರಿಗೆ ಲಾರಿ (ಟಿಎನ್ 28 ಎಜೆ 3010) ಡಿಕ್ಕಿ ಹೊಡೆದಿದೆ.ಘಟನೆಯಲ್ಲಿ ತೀವ್ರ ಗಾಯಗೊಂಡ ಅವರನ್ನು ಕೂಡಲೇ ಬೌರಿಂಗ್‌ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ 9.30ಕ್ಕೆ ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.ಲಾರಿ ಚಾಲಕ ಮುರುಗನ್‌ ಎಂಬಾತನನ್ನು ಬಂಧಿಸಿರುವ ಪೊಲೀಸರು, ಗುರುವಾರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ (ಸಂಚಾರ ) ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)