ಲಾರಿ ಡಿಕ್ಕಿ: ಬೈಕ್‌ ಸವಾರ ಸಾವು

7

ಲಾರಿ ಡಿಕ್ಕಿ: ಬೈಕ್‌ ಸವಾರ ಸಾವು

Published:
Updated:

ಯಲಹಂಕ: ಲಾರಿ ಡಿಕ್ಕಿ ಹೊಡೆದಿದ್ದರಿಂದ ದ್ವಿಚಕ್ರವಾಹನ ಸವಾರರೊಬ್ಬರು ಮೃತಪಟ್ಟಿರುವ ಘಟನೆ ರಾಜಾನುಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಆವಲಹಳ್ಳಿ ಕೆರೆ ಸಮೀಪದಲ್ಲಿ ಭಾನುವಾರ ನಡೆದಿದೆ.ಲಾರಿ ಚಾಲಕರಾಗಿದ್ದ ಅಟ್ಟೂರು ಬಡಾವಣೆ ನಿವಾಸಿ ಈಶ್ವರ್‌(43) ಎಂಬುವವರು ಮೃತಪಟ್ಟವರು.ಸಿಂಗನಾಯಕನಹಳ್ಳಿಯಲ್ಲಿ ವಾಸವಿದ್ದ ತನ್ನ ತಾಯಿಯ ಸ್ನೇಹಿತೆಯನ್ನು ಭೇಟಿ ಮಾಡಲು ಬೆಳಗ್ಗೆ ಸುಮಾರು 11 ಗಂಟೆ ಹೊತ್ತಿನಲ್ಲಿ  ಯಲಹಂಕದ ಕಡೆಯಿಂದ ದೊಡ್ಡಬಳ್ಳಾಪುರ ರಸ್ತೆ ಮಾರ್ಗವಾಗಿ ತೆರಳುತ್ತಿದ್ದ ಸಂದರ್ಭದಲ್ಲಿ ಇವರ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡ ಈಶ್ವರ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಯಲಹಂಕದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಶವವನ್ನು ಪೋಷಕರಿಗೆ ಒಪ್ಪಿಸಲಾಗಿದೆ.ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ  ಚಾಲಕನ ಬಂಧನಕ್ಕೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry