ಲಾರಿ ಡಿಕ್ಕಿ: ಸೈಕಲ್ ಸವಾರ ಸಾವು

7

ಲಾರಿ ಡಿಕ್ಕಿ: ಸೈಕಲ್ ಸವಾರ ಸಾವು

Published:
Updated:

ಹೊಸಕೋಟೆ: ಬಿದರಹಳ್ಳಿ ರಸ್ತೆಯ ಹಿರಂಡಹಳ್ಳಿ ಬಳಿ ಟಿಪ್ಪರ್ ಲಾರಿಯೊಂದು ಸೈಕಲ್‌ಗೆ ಡಿಕ್ಕಿ ಹೊಡೆದುದರಿಂದ ಅದರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ. ಮೃತರನ್ನು ಹಿರಂಡಹಳ್ಳಿಯ ಮಹಮದ್ ಶಫಿಉಲ್ಲಾ (55) ಎಂದು ಗುರುತಿಸಲಾಗಿದೆ. ಅವರು ಚೀಮಸಂದ್ರ ಬಳಿಯ ಕಾರ್ಖಾನೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುವಾರ ಕೆಲಸಕ್ಕೆ ಹೋಗುತ್ತಿದ್ದಾಗ ಹಿಂದುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆಯಿತು. ಕೆಳಕ್ಕೆ ಬಿದ್ದ ಶಫಿಉಲ್ಲಾ ಅವರ ಮೇಲೆ ಲಾರಿಯ ಚಕ್ರ ಹರಿಯಿತು. ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಎಚ್ಚರಿಕೆ: ತಾಲ್ಲೂಕಿನಲ್ಲಿನ ಕೆಲವು ರಸಗೊಬ್ಬರ ಮಾರಾಟಗಾರರು ರಸಗೊಬ್ಬರಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರಾಟ ಮಾಡಿದ ಬಗ್ಗೆ ರೈತರಿಂದ ದೂರು ಬಂದಿದ್ದು ಹೆಚ್ಚಿನ ಬೆಲೆಗೆ ಮಾರಾಟ ಮಾಡಿದಲ್ಲಿ ಅವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ಮಾರಾಟಗಾರರು ತಮ್ಮ ಮಳಿಗೆಗಳ ಮುಂದೆ ಅಧಿಕೃತ ದರಪಟ್ಟಿ, ದಾಸ್ತಾನು ನಮೂದಿಸುವಂತೆ ಹಾಗು ಗ್ರಾಹಕರಿಗೆ ರಸೀತಿ ನೀಡುವಂತೆಯೂ ಸೂಚಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry