ಮಡಿಕೇರಿ: ಇಲ್ಲಿಗೆ ಸಮೀಪದ ಮಂಗಳೂರು ರಾಜ್ಯ ಹೆದ್ದಾರಿ ತಿರುವಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಅವಘಡದಲ್ಲಿ ಕಂಟೇನರ್ ಲಾರಿ ಹರಿದ ಪರಿಣಾಮವಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.

ಬೆಟ್ಟಗೇರಿ ಸಮೀಪದ ಐವತ್ತೊಕ್ಲು ನಿವಾಸಿ ವಿಶ್ವನಾಥ (25) ಎಂಬುವವರೇ ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿ. ಇವರು ಮಡಿಕೇರಿಯಿಂದ ವಾಪಸ್ ತಮ್ಮ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಹಾಗೂ ಮಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಂಟೇನರ್ ಲಾರಿ ನಡುವೆ ಈ ದುರ್ಘಟನೆ ಸಂಭವಿಸಿದೆ.

ಕಂಟೇನರ್ ಲಾರಿ ಚಾಲಕ ಸೋಮಲಿಂಗಪ್ಪ ಅವರನ್ನು ಮಡಿಕೇರಿ ಸಂಚಾರಿ ಪೊಲೀಸರು ಬಂಧಿಸಿದ್ದು, ಕಂಟೇನರ್ ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೃತ ವ್ಯಕ್ತಿಯ ಶವವನ್ನು ಮರಣೋತ್ತರ ಪರೀಕ್ಷೆ ಮಾಡಿದ ನಂತರ ಅವರ ಪೋಷಕರಿಗೆ ನೀಡಲಾಗಿದೆ ಎಂದು ಎಸ್.ಐ ಮಂಜುನಾಥ್ ತಿಳಿಸಿದರು.

ಟ್ರಾಫಿಕ್ ಜಾಮ್: ಈ ದುರ್ಘಟನೆಯಿಂದಾಗಿ ರಾಜ್ಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಂಬುಲೆನ್ಸ್ ಆಗಮಿಸಲು ವಿಳಂಬ ಮಾಡಿದರೆಂದು ಸ್ಥಳೀಯರು ಪ್ರತಿಭಟನೆ ಮಾಡಿದರು. ಕೆಲವರು ಪೊಲೀಸರೊಂದಗೆ ವಾಗ್ವಾದಕ್ಕೂ ಇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.